ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಇದೀಗ ತಮ್ಮ ಆಯ್ಕೆ ಕುರಿತು ಮಾತನಾಡಿದ್ದು, ತಮ್ಮ ಆಯ್ಕೆಗೆ ಯಾರ ವಿರೋಧವೂ ಇಲ್ಲ ಎಂಬುದನ್ನು ಇನ್ನೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅವರನ್ನು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ಈ ವಿಷಯ ತಿಳಿಸಿದರು.
ಭಾರತವನ್ನು ಶಕ್ತಿಶಾಲಿಯನ್ನಾಗಿಸಿ ಮುನ್ನಡೆಸಿಕೊಂಡು ಹೋಗುತ್ತಿರುವ ನೇಂದ್ರ ಮೋದಿ ಅವರು ಮೂರನೇ ಸಲಕ್ಕೆ ಪ್ರಧಾನಿಯಾಗಬೇಕು ಎಂದು ಗಣೇಶನಲ್ಲಿ ಪ್ರಾರ್ಥಿಸಿದ್ದೇನೆ, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ: ಏನಿದು ‘ಈಟ್ ಸ್ಟ್ರೀಟ್’?: ಇದರ ಬಗ್ಗೆ ಏನಂದ್ರು ಮಾಜಿ ಸಚಿವರು?
ರಾಜ್ಯದಲ್ಲಿ ಹಿರಿಯರಿದ್ದರೂ ನನಗೆ ಕೇಂದ್ರದ ವರಿಷ್ಠಾಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಎಲ್ಲರನ್ನೂ ವಿಶ್ಚಾಸಕ್ಕೆ ತೆಗೆದುಕೊಂಡು ಪಕ್ಷದ ಕೆಲಸ ಮಾಡಲಾಗುವುದು. ನನ್ನ ಆಯ್ಕೆ ಮೋದಿ, ಜೆ.ಪಿ.ನಡ್ಡಾ, ಅಮಿತ್ ಷಾ ಅವರ ತೀರ್ಮಾನವಾಗಿದ್ದು ಇದಕ್ಕೆ ಯಾರ ವಿರೋಧವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಗೋವಾಗೆ ಆಗಮಿಸುವ ಪ್ರವಾಸಿಗರ ಮೇಲೆ ನಿರ್ಬಂಧ ಹೇರಲಾಗುವುದೇ?; ಕಾಂಗ್ರೆಸ್ನಿಂದ ಸರ್ಕಾರಕ್ಕೆ ಒತ್ತಾಯ
ರಾಜ್ಯದಲ್ಲಿ ಪಕ್ಷದ ಶಾಸಕಾಂಗ ಸಭೆ ನ.17ಕ್ಕೆ ನಿಗದಿಯಾಗಿದ್ದು ಬಿಜೆಪಿ ಕೇಂದ್ರದ ವೀಕ್ಷಕರು ಭಾಗಿಯಾಗಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು ಇದೀಗ ಜಾತ್ಯತೀತ ಜನತಾದಳವನ್ನು ಎನ್ಡಿಎ ಜತೆ ಸೇರಿಸಿಕೊಳ್ಳಲಾಗಿದೆ. ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲಪಡಿಸಲಾಗುವುದು ಎಂದರು.
ಸಂಸದ ಎಸ್.ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್. ವೇಣುಗೋಪಾಲ್, ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್, ಮಾಜಿ ಶಾಸಕ ರಾಜಣ್ಣ, ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮತ್ತಿತರರು ಹಾಜರಿದ್ದರು.
ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?
ಆ 10 ಸಾವಿರ ಅದೃಷ್ಟವಂತರಲ್ಲಿ ನೀವೂ ಒಬ್ರಾ? ಚೆಕ್ ಮಾಡಿಕೊಳ್ಳುವುದು ಹೇಗೆ?