More

    ಕೆಲವರಿಗೆ ನಾನು ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ: ನೋವು ತೋಡಿಕೊಂಡ ಆರೋಗ್ಯ ಸಚಿವ

    ಬೆಂಗಳೂರು: ಕೆಲವರಿಗೆ ನಾನು ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಆದರೂ ಬಹಳಷ್ಟು ಜನರಿಗೆ ಆರೋಗ್ಯ ಸಚಿವನಾಗಿ ಅಂತಃಕರಣದಿಂದ ಕೆಲಸ ಮಾಡುತ್ತಿದ್ದೇನೆ. ಟೀಕೆಗಳಿಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಕರೊನಾ ಮಾರ್ಗಸೂಚಿಯಡಿ ಒಬ್ಬರಿಗೆ ರಿಯಾಯಿತಿ ಕೊಟ್ಟ ಬಳಿಕ ಮತ್ತೊಬ್ಬರೂ ಅದನ್ನು ಕೇಳುತ್ತಾರೆ. ನಾವೇನು ತಪ್ಪು ಮಾಡಿದ್ದೇವೆ ಎಂದು ಕೇಳುವುದು ಸಹಜ. ಅದು ತಪ್ಪು ಎಂದು ನಾವು ಹೇಳುವುದಿಲ್ಲ. ಅವರ ಮನವಿಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೂವರೆ ಕೋಟಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಕಠಿಣ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯ. ಕೇಂದ್ರ ಸರ್ಕಾರ ಕೂಡ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಕಠಿಣ ಸವಾಲು ಸರ್ಕಾರದ ಮುಂದಿದೆ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ನಾವು ಕ್ರಮ ಕೈಗೊಳ್ಳಲೇಬೇಕಾಗಿದೆ ಎಂದು ಪುನರುಚ್ಚರಿಸಿದರು.

    ಇದನ್ನೂ ಓದಿ: ಚುನಾವಣಾ ಆಯೋಗದ ಹೆಸರಿಗೆ ಬೇರೆಯೇ ಅರ್ಥ ಕಲ್ಪಿಸಿದ ರಾಹುಲ್ ಗಾಂಧಿ !

    ಮಹಾರಾಷ್ಟ್ರದ ಪರಿಸ್ಥಿತಿ ನೋಡಿಕೊಂಡು ನಾವು ಹೆಜ್ಜೆ ಇಡಬೇಕಿದೆ. ಮಹಾರಾಷ್ಟ್ರ ರಾಜ್ಯ ಒಂದರಲ್ಲೇ ಕರೊನಾ ಸೋಂಕು ತೀವ್ರವಾಗಿ ಹೆಚ್ಚಾಗಿದೆ. ಶನಿವಾರ ಒಂದೇ ದಿನ 50 ಸಾವಿರ ಸೋಂಕಿನ ಪ್ರಕರಣಗಳು ದಾಖಲಾಗಿವೆ. 500 ಮಂದಿ ಸಾವನ್ನಪ್ಪಿದ್ದಾರೆ. ಈ ಪರಿಸ್ಥಿತಿ ರಾಜ್ಯದಲ್ಲಿ ಆಗದಂತೆ ನೋಡಿಕೊಳ್ಳಬೇಕಾಗಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮಗೆ ಸಂಕಷ್ಟ ಎದುರಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲಿ ಐಸಿಯುಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಮಾಸ್ಕ್ ಕಡ್ಡಾಯಗೊಳಿಸುವುದರ ಜತೆಗೆ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದರು.

    ಚತ್ತೀಸ್​ಗಢದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ 22 ಯೋಧರು ಹುತಾತ್ಮ!

    ಸಿಡಿ ಲೇಡಿ ಜತೆ ಸುಧಾಕರ್​ ನಂಟು? ಈ ಬಗ್ಗೆ ಮೌನ ಮುರಿದ ಮಾಜಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts