More

    ನಾನು ಪ್ರಜ್ವಲ್ ಪರವಾಗಿ ಇಲ್ಲ. ಆತನ ಅಪರಾಧ ಸಾಬೀತಾದರೆ ಶಿಕ್ಷೆ ಕೊಡಿ: ಎಚ್‌ಡಿಕೆ

    ಮೈಸೂರು: ನಾನು ಪ್ರಜ್ವಲ್ ಪರವಾಗಿ ಇಲ್ಲ. ಆತನ ಅಪರಾಧ ಸಾಬೀತಾದರೆ ಶಿಕ್ಷೆ ಕೊಡಿ. ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ ಪೆನ್‌ಡ್ರೈವ್ ವಿತರಣೆ ಹಿಂದೆ ಇದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

    8 ಜನ ಪೊಲೀಸ್‌ರ ರಕ್ಷಣೆಯಲ್ಲಿ ಕಾರ್ತಿಕ್ ಇದ್ದಾನೆ? ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ಕೋರ್ಟ್‌ಗೆ ಹಾಜರು ಪಡಿಸಿಲ್ಲ ಎಂದು ಪ್ರಶ್ನಿಸಿದರು.

    ‘ಅವರೇನು ಟೆರರಿಸ್ಟಾ ಫೋನ್ ಟ್ಯಾಪ್ ಮಾಡೋಕೆ’ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಬಳಿ ಇರೋರೆಲ್ಲಾ ಟೆರರಿಸ್ಟ್‌ಗಳೇ. ಬಹಳಷ್ಟು ಟೆರರಿಸ್ಟ್‌ಗಳು ಸುತ್ತಮುತ್ತವೇ ಇದ್ದಾರೆ. ಈಗ ಸಿಎಂ ಪೆನ್‌ಡ್ರೈವ್ ಬಗ್ಗೆ ಯಾರೂ ಮಾತಾಡಬೇಡಿ ಅಂದಿದ್ದಾರೆ. ಏಕೆಂದರೆ ನಿಮ್ಮ ಬುಡಕ್ಕೆ ಬರ್ತಾ ಇದೆಯಲ್ಲ. ಅದಕ್ಕೆ ಈಗ ಮಾತಾಡಬೇಡಿ ಅಂತಿದ್ದಾರೆ ಎಂದು ಲೇವಡಿ ಮಾಡಿದರು.

    ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕರಾದ ಕೆ.ಮಹದೇವ್, ಅಶ್ವಿನ್ ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts