blank

ನಾನು ರಾಜೀನಾಮೆ ನೀಡಲು ಸಿದ್ಧ, ಸಿಎಂ ಸಿದ್ದರಾಮಯ್ಯ ತಯಾರಿದ್ದಾರಾ? ಆರ್.ಅಶೋಕ್ ಸವಾಲು

r ashok

ಬೆಂಗಳೂರು: ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

blank

ತಮ್ಮ ಮೇಲಿನ ಆರೋಪ ಕುರಿತು ಆರ್‌.ಅಶೋಕ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು. ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ, ಸ್ಫೋಟಕ ಮಾಹಿತಿ ಬಯಲು

ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹಿಸಿಲ್ಲ. ಅಷ್ಟೇ ಅಲ್ಲದೆ ನ್ಯಾಯಾಲಯ ಕೂಡ ಇದರ ವಿರುದ್ಧ ತನಿಖೆ ಮಾಡಿಸಲು ಮುಂದಾಗಲಿಲ್ಲ. ರಾಜ್ಯಪಾಲರು ಹಾಗೂ ನ್ಯಾಯಾಲಯವೇ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟರೆ, ಕಾಂಗ್ರೆಸ್‌ ಪಕ್ಷ ಮಾತ್ರ ಇದರಲ್ಲಿ ತೀರ್ಪು ನೀಡಲು ಮುಂದಾಗಿದೆ. ಅಂದರೆ ಕಾಂಗ್ರೆಸ್‌ ಪಕ್ಷ ತನ್ನನ್ನು ನ್ಯಾಯಾಲಯಕ್ಕಿಂತ ದೊಡ್ಡದು ಎಂದುಕೊಂಡಿದೆ ಎಂದು ವ್ಯಂಗ್ಯವಾಡಿದರು.

ನಾನು ಆರೋಪ ಮುಕ್ತ, ಸಿದ್ದರಾಮಯ್ಯ ಅಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣ ತನಿಖೆಯಾಗಬೇಕಾದ ಪ್ರಕರಣ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿಯವರು ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರ ನಾನು ಕೋರ್ಟ್‌ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ. ಕೋರ್ಟ್‌ನಲ್ಲಿ ನಾನು ಆಪಾದಿತ ಎಂದು ಹೇಳಿರಲಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕೂಡ ನನ್ನನ್ನು ಆರೋಪ ಮುಕ್ತ ಮಾಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಆರೋಪ ಮುಕ್ತವಾಗಿಲ್ಲ. ಈ ದೇಶದಲ್ಲಿ ಕೋರ್ಟ್‌ ದೊಡ್ಡದೋ, ಕಾಂಗ್ರೆಸ್‌ ದೊಡ್ಡದೋ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್‌ ಪಕ್ಷ ಕೋರ್ಟ್‌ಗಿಂತ ದೊಡ್ಡದಲ್ಲ

ಕಾಂಗ್ರೆಸ್‌ ಪಕ್ಷ ಕೋರ್ಟ್‌ಗಿಂತ ದೊಡ್ಡದಲ್ಲ. ಗೌರವಾನ್ವಿತ ಸಚಿವರಾದ ಕೃಷ್ಣ ಭೈರೇಗೌಡರ ಕೋಲಾರದ ಆಸ್ತಿಗಳೆಲ್ಲವೂ ಕುಟುಂಬದಿಂದ ಅವರಿಗೆ ಬಂದಿದೆ. ಅದೇ ರೀತಿ ಮುನಿವೆಂಕಟಪ್ಪ ಅವರು ವಿಲ್‌ ತಯಾರಿಸಿ ಅವರ ಮಕ್ಕಳಿಗೆ ಆಸ್ತಿ ಕೊಟ್ಟಿದ್ದಾರೆ. ಆ ಕುಟುಂಬದಲ್ಲಿ ಸುಮಾರು 20 ಜನರಿದ್ದು, ನನ್ನ ಹೆಸರಿಗೆ ನೋಂದಣಿಯಾದಾಗ ಆ 20 ಜನರು ಕೂಡ ಸಹಿ ಹಾಕಿದ್ದಾರೆ. ಇದು ಹೇಗೆ ಬೇನಾಮಿಯಾಗುತ್ತದೆ? ಎಂದು ಪ್ರಶ್ನಿಸಿದರು.

1995 ರಲ್ಲಿ ಆಗಿರುವ ಪಹಣಿಯಲ್ಲಿ ಇಡೀ ಕುಟುಂಬದವರ ಹೆಸರಿದೆ. ಆದರೆ ಇದು ಬಿಡಿಎ ಭೂಮಿ ಎಂದು ಸಚಿವರು ಸುಳ್ಳು ಹೇಳಿದ್ದಾರೆ. ಇದನ್ನು ಬಿ.ಎಸ್‌.ಯಡಿಯೂರಪ್ಪ ಅಕ್ರಮವಾಗಿ ಡಿ ನೋಟಿಫೈ ಮಾಡಿದ್ದಾರೆ ಎಂದು ಕೂಡ ಸುಳ್ಳು ಆರೋಪ ಮಾಡಿದ್ದಾರೆ. ಸುಮಾರು 1 ಎಕರೆ ವ್ಯಾಪ್ತಿಯ ಈ ಜಾಗ, ಹೊರವರ್ತುಲ ರಸ್ತೆಯ ಪಕ್ಕವಿದೆ. ರಸ್ತೆಗೆ ಅಗತ್ಯವಿರುವ ಭೂಮಿ ಪಡೆದು, ಉಳಿದಿದ್ದನ್ನು ಡಿನೋಟಿಫೈ ಮಾಡಲು ತೀರ್ಮಾನಿಸಲಾಗಿತ್ತು ಎಂದೇ ಅಂದು ಸಿಎಂ ಆಗಿದ್ದ ಎಸ್‌.ಎಂ.ಕೃಷ್ಣ ಹೇಳಿದ್ದರು.

r ashok

ಈ ಭೂಮಿ 70:30 ಅನುಪಾತದಲ್ಲಿ ಹಂಚಿಕೆಯಾಗಿದೆ. ಅಂದರೆ 70% ಸರ್ಕಾರಕ್ಕೆ ಹಾಗೂ 30% ಮಾಲೀಕರಿಗೆ ನೀಡಲಾಗಿದೆ. ಅಂದರೆ ಬಿಡಿಎಗೆ ಹೆಚ್ಚು ಲಾಭವಾಗಿದೆ. ಉಳಿದ ಜಮೀನು ಅಗತ್ಯವಿಲ್ಲವೆಂದು ಸರ್ಕಾರವೇ ವಾಪಸ್‌ ನೀಡಿದೆ. ಬಿಡಿಎದಿಂದಲೇ ಭೂ ಮಾಲೀಕರಿಗೆ ಪತ್ರ ಬರೆದಿದ್ದು, ಅದರಂತೆ ಭೂಮಿಯನ್ನು ಬಿಟ್ಟುಕೊಡಲಾಗಿದೆ. ಇಲ್ಲಿ ಎಲ್ಲವೂ ಕಾನೂನು ಪ್ರಕಾರವೇ ನಡೆದಿದೆ. ನನ್ನ ವಿರುದ್ಧ ತನಿಖೆ ನಡೆಸಲು ಅನುಮತಿ ಕೊಡುವಂತೆ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರಧ್ವಾಜ್‌ ಅವರನ್ನು ಕೋರಲಾಗಿತ್ತು. ಆದರೆ ರಾಜ್ಯಪಾಲರು ಕೂಡ ನನ್ನ ವಿರುದ್ಧ ತನಿಖೆಗೆ ಅವಕಾಶ ನೀಡಲಿಲ್ಲ.

ಆದರೂ ನನ್ನನ್ನು ಕಾಂಗ್ರೆಸ್‌ ಸಚಿವರು ಭೂ ಕಬಳಿಕೆದಾರ ಎನ್ನುತ್ತಿದ್ದಾರೆ. ಕಾಂಗ್ರೆಸ್‌ನ ರಾಜ್ಯಪಾಲರಾಗಲೀ, ನ್ಯಾಯಾಲಯವಾಗಲೀ ನನ್ನನ್ನು ತಪ್ಪಿತಸ್ಥ ಎಂದು ಭಾವಿಸಿಲ್ಲ. ಆದರೆ ಈಗ ಸಿದ್ದರಾಮಯ್ಯನವರಿಗೆ ನನ್ನನ್ನು ಹೋಲಿಸಲಾಗುತ್ತಿದೆ ಎಂದರು.

ರಾಜೀನಾಮೆ ನೀಡುತ್ತಾರೆಯೇ?

ಕಂದಾಯ ಸಚಿವ ಕೃಷ್ಣ ಬೈರೇಗೌಡರ ಬಳಿ ಅಧಿಕಾರವಿದೆ. ಎಚ್‌.ಕೆ.ಪಾಟೀಲ್‌ ಹಾಗೂ ಡಾ.ಜಿ.ಪರಮೇಶ್ವರ್‌ ಹಿರಿಯರು. ಸತೀಶ್‌ ಜಾರಕಿಹೊಳಿ ಮಾತ್ರ ಈ ಬಗ್ಗೆ ಮಾತಾಡಿಲ್ಲ. ಏಕೆಂದರೆ ಇದು ಬುರುಡೆ ಕೇಸ್‌ ಎಂದು ಅವರಿಗೂ ಗೊತ್ತಿತ್ತು. ಈ ನಾಲ್ಕು ಸಚಿವರು ನನಗೆ ಆದರ್ಶವಾಗಿದ್ದಾರೆ. ಕೃಷ್ಣ ಬೈರೇಗೌಡರು ಈ ಹಿಂದೆ ವಿಧಾನಸಭೆಯಲ್ಲಿ ಅಶೋಕ್‌ ನಮ್ಮ ಬಂಧುಗಳು ಎಂದು ಹೇಳಿದ್ದರು.

ನಾನು ಕನ್ನಡ ಶಾಲೆಯಲ್ಲಿ ಓದಿದವನು. ಆದರೆ ರಾಜ್ಯಪಾಲರಿಗೆ ಇಂಗ್ಲಿಷ್‌ನಲ್ಲಿ ಪತ್ರ ಬರೆಯಬೇಕಾಗುತ್ತದೆ. ಸ್ಪೀಕರ್‌ಗೂ ಇಂಗ್ಲಿಷ್‌ನಲ್ಲೇ ಪತ್ರ ಬರೆಯಬೇಕಾಗುತ್ತದೆ. ನಾನೀಗ ಏನು ಮಾಡಬೇಕು ಹಾಗೂ ಯಾರಿಗೆ ಪತ್ರ ಬರೆಯಬೇಕೆಂದು ಕೃಷ್ಣ ಬೈರೇಗೌಡರು ತಿಳಿಸಿದರೆ ನಾನು ಹಾಗೆಯೇ ನಡೆದುಕೊಳ್ಳುತ್ತೇನೆ. ನಾನು ಯಾವುದೇ ಸಚಿವರಿಗೆ ಸವಾಲು ಹಾಕುತ್ತಿಲ್ಲ. ನನಗೆ ಯಾವುದೇ ಆಯ್ಕೆ ಇಲ್ಲ. ಈ ನಾಲ್ಕು ಸಚಿವರು ನೈತಿಕತೆಯ ಆಧಾರದಲ್ಲಿ ಏನು ಹೇಳುತ್ತಾರೋ, ಅದನ್ನೇ ಪಾಲನೆ ಮಾಡುತ್ತೇನೆ ಎಂದರು.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank