More

    ಮಣಿಪುರ ವಿಡಿಯೋ ನೋಡಿದ ನಂತರ ನನಗೆ ನಿದ್ರೆ ಬರುತ್ತಿಲ್ಲ: ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್

    ಮಣಿಪುರ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆ ಖಂಡಿಸಿ ಪ್ರತಿಯೊಬ್ಬರು ಟ್ವೀಟ್ ಮಾಡುತ್ತಿದ್ದಾರೆ.

    ಈಗಾಗಲೇ ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಘಟನೆ ಖಂಡಿಸಿ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.
    ಇದೀಗ ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, “ವಿಡಿಯೋವನ್ನು ನೋಡಿದ ನಂತರ ನನಗೆ ನಿದ್ರೆ ಬರುತ್ತಿಲ್ಲ.. ಎಫ್​​​​​ಐಆರ್​​​ ದಾಖಲಾಗಿದ್ದರೂ ಯಾರನ್ನೂ ಬಂಧಿಸದಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದ್ದಾರೆ.

    “ಮಣಿಪುರದಲ್ಲಿ ಹಿಂಸಾಚಾರವನ್ನು ನಿಲ್ಲಿಸಬೇಕು ಮತ್ತು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಪತ್ರ ಬರೆಯುವುದಾಗಿ” ಸ್ವಾತಿ ಮಲಿವಾಲ್ ಗುರುವಾರ ಹೇಳಿದ್ದಾರೆ.

    ಎನ್​​​ಡಿಎ ಜೊತೆ ಹೋಗಲು ಕುಮಾರಸ್ವಾಮಿ ತಯಾರಿ; ದೇವೇಗೌಡರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts