ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ: CM ಸಿದ್ರಾಮಯ್ಯ

dk - 2025-07-01T154806.710
Published on

ಬೆಂಗಳೂರು: ಬಿ.ಆರ್.ಪಾಟೀಲ್ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಅವರು ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು ಎಂದು CM ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದರು. ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಕಾಲ್ತುಳಿತದ ಪ್ರಕರಣ; ಮೇಲ್ಮನವಿ ಸಲ್ಲಿಸಲು ಅವಕಾಶವಿದೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಜಾತಿಗಣತಿ ವಿವರವನ್ನು ಆನ್ಲೈನ್​ನಲ್ಲಿಯೂ ಸಲ್ಲಿಸಿ

ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್​ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net