Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ನಮ್ಮ ತಂದೆ ಬ್ರಾಹ್ಮಣರನ್ನು ಸೋಲಿಸಿದ್ರು, ನಾನೂ ಬ್ರಾಹ್ಮಣರನ್ನು ಸೋಲಿಸಿದ್ದೇನೆ: ಆನಂದ ನ್ಯಾಮಗೌಡ

Wednesday, 14.11.2018, 5:41 PM       No Comments

ಬಾಗಲಕೋಟೆ: ನಮ್ಮ ತಂದೆ ಬ್ರಾಹ್ಮಣರನ್ನು ಸೋಲಿಸಿ ಶಾಸಕರಾಗಿದ್ದರು, ಈಗ ನಾನೂ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿ ಶಾಸಕನಾಗಿದ್ದೇನೆ ಎಂದು ಇತ್ತೀಚಿಗೆ ಜಮಖಂಡಿಯಿಂದ ಶಾಸಕರಾಗಿ ಆಯ್ಕೆಯಾದ ಆನಂದ ನ್ಯಾಮಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜಮಖಂಡಿಯಲ್ಲಿ ಅಲ್ಪಸಂಖ್ಯಾತ ಸಮಾಜದಿಂದ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಆನಂದ ನ್ಯಾಮಗೌಡ ಅವರು 1990ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಅವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿದ್ದರು. ಅದು ಇಡೀ ದೇಶದ ಗಮನ ಸೆಳೆದಿತ್ತು. ಈಗ ನಾನೂ ಅದೇ ಬ್ರಾಹ್ಮಣರ ವಿರುದ್ಧ 40 ಸಾವಿರ ಮತಗಳ ಅಂತರದಲ್ಲಿ ಗೆದ್ದು ರಾಜ್ಯದ ಗಮನ ಸೆಳೆದಿದ್ದೇನೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಆನಂದ ನ್ಯಾಮಗೌಡ ಅವರು ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಅವರ ವಿರುದ್ಧ ಗೆದ್ದಿದ್ದರು. ತಂದೆಯ ನಿಧನದ ಅನುಕಂಪದಲ್ಲಿ ಅವರು ಗೆಲುವು ಸಾಧಿಸಿದ್ದರು. ಆದರೆ, ಈಗ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬ್ರಾಹ್ಮಣ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಗೆಲುವಿಗೆ ತಂದೆಯ ಕೆಲಸ, ಜನರ ಅನುಕಂಪವೇ ಕಾರಣ: ಆನಂದ ನ್ಯಾಮಗೌಡ

Leave a Reply

Your email address will not be published. Required fields are marked *

Back To Top