ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಬರುವ ವಿಚಾರ ನನಗೆ ಮಾಹಿತಿ ಇಲ್ಲ: ಬಿ ಎಸ್‌ ಯಡಿಯೂರಪ್ಪ

ಶಿವಮೊಗ್ಗ: ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಬರುವ ವಿಚಾರ ನನಗೇನು ಮಾಹಿತಿ ಇಲ್ಲ. ಇದರಲ್ಲಿ ನಾನು ತಲೆ ಹಾಕಿಲ್ಲ. ಶಿವಮೊಗ್ಗದಲ್ಲಿ ಗೆಲ್ಲುವ ವಾತಾವರಣ ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪ್ರಮುಖರ‌ ಸಭೆ ನಡೆದ ಬಳಿಕ ಮಾತನಾಡಿದ ಬಿಎಸ್​ವೈ, ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ವರದಿ ನೀಡಿದ್ದಾರೆ. ಸುಮಾರು ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ. ಇಂದು ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆಸಲಾಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಸಿಎಂ ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ದೇವೆಗೌಡರು ಸೇರಿದಂತೆ ಅನೇಕ ನಾಯಕರು ಕ್ಷೇತ್ರಕ್ಕೆ ಬಂದು ಹೋಗಿದ್ದಾರೆ. ಇವರು ಬಂದು ಹೋದ ತಕ್ಷಣ ಫಲಿತಾಂಶ ಬದಲಿಸಲು ಸಾಧ್ಯವಿಲ್ಲ. ಕುಂದಗೊಳ ಹಾಗೂ ಚಿಂಚೋಳಿಯಲ್ಲಿ ನಡೆಯಲಿರುವ ವಿಧಾನಸಭೆ ಉಪ ಚುನಾವಣೆಗಾಗಿ, ನಾಳೆ ಬೆಂಗಳೂರಿನಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಕುಳಿತು ಚರ್ಚಿಸಲಾಗುವುದು ಎಂದು ಹೇಳಿದರು.

ಬಿಜೆಪಿ ಪ್ರಮುಖರ‌ ಸಭೆಯಲ್ಲಿ ಪರಿಷತ್‌ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, MLC ಆಯನೂರು ಮಂಜುನಾಥ್ ಸೇರಿ ಹಲವರು ಭಾಗಿಯಾಗಿದ್ದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *