ಜನರ ನಿರೀಕ್ಷೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ

 ಗುಂಡ್ಲುಪೇಟೆ : ಕ್ಷೇತ್ರದ ಜನರ ನಿರೀಕ್ಷೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲಿದ್ದೇನೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ತಾಲೂಕಿನ ಸಂಪಿಗೆಪುರ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಹದಗೆಟ್ಟಿರುವ ರಸ್ತೆಗಳಿಗೆ ಕಾಯಕಲ್ಪ, ಚರಂಡಿ ನಿರ್ಮಾಣ, ಎಸ್‌ಸಿ-ಎಸ್‌ಟಿ ಬಡಾವಣೆಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ಸಂಪಿಗೆಪುರ ಗ್ರಾಮದಿಂದ ಕಬ್ಬಹಳ್ಳಿಗೆ ಸಂಪರ್ಕ ಕಲ್ಪಿಸಲು ಒಂದು ಕೋಟಿ ರೂ.ಅನುದಾನ ನೀಡಲಾಗಿದೆ. ನದಿಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮುಕ್ತಾಯ ಹಂತದಲ್ಲಿದೆ ಎಂದರು.

ಬಿಜೆಪಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್, ರೈತ ಮೊರ್ಚಾ ಅಧ್ಯಕ್ಷ ಮಾಡ್ರಹಳ್ಳಿ ನಾಗೇಂದ್ರ, ಪುರಸಭೆ ಸದಸ್ಯ ಎನ್.ಗೋವಿಂದರಾ ಜನ್, ತಾಪಂ ಮಾಜಿ ಸದಸ್ಯ ಸಿ.ಮಹದೇವಪ್ರಸಾದ್, ಗ್ರಾಪಂ ಸದಸ್ಯ ಮಹೇಶ್, ಪಿಕಾರ್ಡ್‌ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಂ.ಮಲ್ಲಿಕಾ ರ್ಜುನ, ಮುಖಂಡರಾದ ನಾಗರಾಜಪ್ಪ, ಮಹದೇವಪ್ಪ, ಪ್ರಸಾದ್, ತಮ್ಮಯಪ್ಪ ಹಲವರು ಇದ್ದರು.