ಈ ಬಾರಿಯೂ ಕಪ್ ಗೆಲ್ಲದಿರಲಿ ಎಂದು ಪ್ರಾರ್ಥಿಸುತ್ತೇನೆ; IPL​ ಆರಂಭಕ್ಕೂ ಮುನ್ನ ಆರ್​ಸಿಬಿಯನ್ನು ಕೆಣಕಿದ ಅಂಬಾಟಿ ರಾಯುಡು

Rayudu RCB
Published on

ನವದೆಹಲಿ: ವಿಶ್ವದ ಮಿಲಿಯನ್ ಡಾಲರ್ ಟೂರ್ನಿಗಳಲ್ಲಿ ಒಂದಾದ 18ನೇ ಆವೃತ್ತಿಯ ಐಪಿಎಲ್ (IPL) ಆರಂಭವಾಗುವುದಕ್ಕೆ ದಿನಗಣನೆ ಆರಂಭವಾಗಿದ್ದು, ಕ್ರೀಡಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇನ್ನೂ ಈ ಬಾರಿಯ ಟೂರ್ನಿಗೆ ಸಂಬಂಧಿಸಿದಂತೆ ನಡೆದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಅಳೆದು ತೂಗಿ ಆಟಗಾರರನ್ನು ಖರೀದಿಸುವ ಮೂಲಕ ಬಲಿಷ್ಠ ತಂಡವನ್ನು ಕಟ್ಟುವ ಮೂಲಕ ಆರ್​ಸಿಬಿ ಫ್ರಾಂಚೈಸಿಯು ಅಭಿಮಾನಿಗಳ ಬಹುವರ್ಷದ ಕನಸನ್ನು ಸಾಕಾರಗೊಳಿಸುವ ಮುನ್ಸೂಚನೆಯನ್ನು ನೀಡಿದೆ.

17ನೇ ಆವೃತ್ತಿಯಲ್ಲಿ ಸತತ ಸೋಲಿನ ಬಳಿಕ ಭರ್ಜರಿ ಕಮ್​ಬ್ಯಾಕ್ ಮಾಡಿದ್ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಿತ್ತು. ನಾಕೌಟ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಆರ್​ಸಿಬಿ ತಂಡವು ಪ್ಲೇಆಫ್​ನಲ್ಲಿ ರಾಜಸ್ಥಾನದ ವಿರುದ್ಧ ಎಡವಿತ್ತು. ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಮಾಜಿ ಆಟಗಾರ ಅಂಬಾಟಿ ರಾಯುಡು ಇದೀಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಆರ್​ಸಿಬಿ ಕಪ್​ ಗೆಲ್ಲಿದಿರಲೆಂದು ಪ್ರಾರ್ಥಿಸುವುದಾಗಿ ಹೇಳುವ ಮೂಲಕ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪಾಡ್​ಕಾಸ್ಟ್ ಒಂದರಲ್ಲಿ ಈ ಕುರಿತಾಗಿ ಮಾತನಾಡಿರುವ ರಾಯುಡು, ಆರ್​ಸಿಬಿ ತಂಡವು ಮುಂದೊಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ. ಏಕೆಂದರೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲಬೇಕು. ಮಹೇಂದ್ರ ಸಿಂಗ್ ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಆಗಬಹುದು. ಹೀಗಾಗಿ ನಾನು ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಆಶಿಸುತ್ತೇನೆ.

ಈ ಹಿಂದೆ ಆರ್​ಸಿಬಿ ತಂಡದ ಪ್ರದರ್ಶನ ಹಾಗೂ ವಿರಾಟ್ ಕೊಹ್ಲಿ ಕುರಿತು ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಅಂಬಾಟಿ ರಾಯುಡು ಇದೀಗ ಮತ್ತೊಮ್ಮೆ ತಮ್ಮ ಹೇಳಿಕೆಯ ಮೂಲಕ ಮುನ್ನೆಲೆಗೆ ಬಂದಿದ್ದು, ಆರ್​ಸಿಬಿ ಕಪ್ ಗೆಲ್ಲದಿರಲಿ ಎಂದು ಪ್ರಾರ್ಥಿಸುವುದಾಗಿ ಅಂಬಾಟಿ ರಾಯುಡು ಬಹಿರಂಗವಾಗಿ ಹೇಳಿರುವುದು ಆರ್​ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net