17.8 C
Bengaluru
Wednesday, January 22, 2020

ವಿವಾದದಿಂದ ಪಾಠ ಕಲಿತಿದ್ದೇನೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಖಾಸಗಿ ವಾಹಿನಿಯ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿ ಭಾರತ ತಂಡದಿಂದ ಅಮಾನತು ಶಿಕ್ಷೆಗೆ ಒಳಗಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಈಗ ಹೊಸ ವ್ಯಕ್ತಿಯಾಗಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಹೋರಾಟದಲ್ಲಿರುವ ರಾಹುಲ್, ಆಸೀಸ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ನಿರ್ವಹಣೆ ಮೂಲಕ ಗಮನಸೆಳೆದಿದ್ದಾರೆ. ‘ವಿವಾದದಿಂದ ಸ್ವಲ್ಪ ಮಟ್ಟಿಗೆ ವಿನೀತನಾಗಿದ್ದೇನೆ. ಹಿಂದೆಂದಿಗಿಂತಲೂ ಈಗ ಟೀಮ್ ಇಂಡಿಯಾ ಕ್ಯಾಪ್‌ನ ಮೌಲ್ಯ ನನ್ನ ಪಾಲಿಗೆ ಹೆಚ್ಚಾಗಿದೆ’ ಎಂದಿದ್ದಾರೆ.
ಅಸಭ್ಯ ಹೇಳಿಕೆಗಳಿಗಾಗಿ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಅಮಾನತು ಶಿಕ್ಷೆ ವಿಧಿಸಿತ್ತು. ಪ್ರಸ್ತುತ ಈ ಪ್ರಕರಣ ವಿಚಾರಣೆಯ ಹಂತದಲ್ಲಿದ್ದರೂ ಇವರಿಬ್ಬರ ಮೇಲಿನ ಅಮಾನತು ಶಿಕ್ಷೆಯನ್ನು ತೆಗೆಯಲಾಗಿದ್ದು, ಆಡಲು ಅವಕಾಶ ನೀಡಲಾಗಿದೆ. ಆಸ್ಟ್ರೇಲಿಯಾ ಪ್ರವಾಸದ ಸೀಮಿತ ಓವರ್‌ಗಳ ಸರಣಿಯ ನಡುವೆ ತಂಡದಿಂದ ಹೊರಬಿದ್ದಿದ್ದ ರಾಹುಲ್ ಬಳಿಕ ಭಾರತ ಎ ತಂಡದ ಪರವಾಗಿ ಆಡಿ ಾರ್ಮ್ ಕಂಡುಕೊಂಡಿದ್ದರು.

ಆಸೀಸ್ ವಿರುದ್ಧ 2ನೇ ಟಿ20 ಪಂದ್ಯದ ಬಳಿಕ ಇದರ ಬಗ್ಗೆ ಮಾತನಾಡಿದ ಅವರು, ‘ಅದು ಕಠಿಣ ಸಮಯವಾಗಿತ್ತು ಎನ್ನುವು ದರಲ್ಲಿ ಯಾವುದೇ ಅನುಮಾನವಿಲ್ಲ. ಒಬ್ಬ ಆಟಗಾರನಾಗಿ, ವ್ಯಕ್ತಿಯಾಗಿ ಪ್ರತಿಯೊಬ್ಬರೂ ಜೀವನದಲ್ಲಿ ಕಠಿಣ ಸಮಯವನ್ನು ಎದುರಿಸುತ್ತಾರೆ. ಬಹುಶಃ ಅದು ನನ್ನ ಸಮಯವಾಗಿತ್ತು. ಆದರೆ, ಈ ಸಮಯವನ್ನು ಆಟ ಹಾಗೂ ಅಭ್ಯಾಸದ ಮೇಲೆ ವ್ಯಯಿಸಿದೆ. ಬಂದಿದ್ದನ್ನು ಬಂದ ಹಾಗೆ ಸ್ವೀಕರಿಸುವ ಮನೋಭಾವ ನನ್ನದು’ ಎಂದು ಹೇಳಿದರು. ಇಡೀ ಪ್ರಕರಣದ ಬಳಿಕ ನಾನು ಸ್ವಲ್ಪ ವಿನೀತನಾಗಿದ್ದೇನೆ. ದೇಶಕ್ಕಾಗಿ ಆಡಲು ಸಿಕ್ಕಿದ ಅವಕಾಶವನ್ನು ನಾನು ಗೌರವಿಸುತ್ತೇನೆ. ಸಿಕ್ಕ ಪ್ರತಿ ಅವಕಾಶಗಳನ್ನೂ ಎಚ್ಚರಿಕೆಯಿಂದ ಬಳಸಿಕೊಳ್ಳುತ್ತೇನೆ ಎಂದು 26 ವರ್ಷದ ರಾಹುಲ್ ತಿಳಿಸಿದರು.

ದ್ರಾವಿಡ್‌ರಿಂದ ಸಹಾಯ ಸಿಕ್ಕಿತು
ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಸ್ವಲ್ಪ ದಿನ ಬಿಡುವು ಸಿಕ್ಕಿತ್ತು. ಈ ವೇಳೆ ಭಾರತ ಎ ತಂಡದ ಪರವಾಗಿ ಆಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಅಲ್ಲಿ ಒತ್ತಡ ಸ್ವಲ್ಪ ಕಡಿಮೆ ಇರುತ್ತದೆ. ಈ ಪಂದ್ಯಗಳಲ್ಲಿ ನನ್ನ ಕೌಶಲ ಹಾಗೂ ಬ್ಯಾಟಿಂಗ್ ತಂತ್ರಗಾರಿಕೆ ಮೇಲೆ ಹೆಚ್ಚಿನ ಗಮನ ನೀಡಿದೆ. ಅದಲ್ಲದೆ, ರಾಹುಲ್ ದ್ರಾವಿಡ್ ಅವರೊಂದಿಗೆ ಹೆಚ್ಚಿನ ಸಮಯ ಕಳೆದೆ. ನನ್ನ ಆಟದೊಂದಿಗೆ ಕ್ರಿಕೆಟ್‌ನ ವಿಚಾರಗಳನ್ನು ಚರ್ಚಿಸುತ್ತಿದ್ದೆ. ಭಾರತ ಎ ತಂಡದ ಪರವಾಗಿ ಆಡಿದ ಐದು ಪಂದ್ಯಗಳಲ್ಲಿ ಅವರು ಬಹಳ ಸಹಾಯ ಮಾಡಿದರು. ಕ್ರೀಸ್‌ನಲ್ಲಿ ಇದ್ದಷ್ಟು ಕ್ಷಣವನ್ನೂ ಆನಂದಿಸಿದೆ. ಮತ್ತೆ ಈ ತಂಡವನ್ನು ಕೂಡಿಕೊಂಡಿದ್ದು ಹಾಗೂ ನೀಲಿ ಜೆರ್ಸಿಯನ್ನು ಧರಿಸಿದ್ದು ವಿಶೇಷ ಅನಿಸುತ್ತಿದೆ ಎಂದು ರಾಹುಲ್ ಹೇಳಿದರು.

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಸೋತ ಮೊದಲ ದ್ವಿಪಕ್ಷೀಯ ಟಿ20 ಸರಣಿ ಸೋತಿದ್ದು ಮಾತ್ರವಲ್ಲ, ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ತವರಿನಲ್ಲಿ ಕಂಡ ಮೊದಲ ಸರಣಿ ಸೋಲು ಇದಾಗಿದೆ. ಭಾರತದಲ್ಲಿ ಈವರೆಗೂ 15 ಸರಣಿಗಳಲ್ಲಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ, ಈವರೆಗೂ ಎಲ್ಲ ಸರಣಿಗಳಲ್ಲೂ ಗೆಲುವು ಕಂಡಿದ್ದರು.

ಭಾರತ ತಂಡದೊಂದಿಗೆ ನಾನು 4-5 ವರ್ಷಗಳಿಂದ ಇದ್ದೇನೆ. ಆಟವನ್ನು ಅರಿತುಕೊಂಡಿದ್ದೇನೆ. ಕ್ರಿಕೆಟರ್‌ಆಗಿ ನನ್ನ ಸ್ಥಾನ ಎನ್ನುವುದು ತಿಳಿದಿದೆ. ಪ್ರತಿ ಹಂತದಲ್ಲೂ ಸ್ಥಿರ ನಿರ್ವಹಣೆ ತೋರುತ್ತಾ ಪ್ರಗತಿ ಸಾಧಿಸುತ್ತಿರಬೇಕು. ತಂಡದಿಂದ ಹೊರಗುಳಿದಾಗ ನನ್ನ ಮೇಲೆ ಒತ್ತಡವಿತ್ತು. ಆದರೆ, ಈ ಸರಣಿಯಲ್ಲಿ ರನ್ ಗಳಿಸುವ ಮೂಲಕ ಸ್ವಲ್ಪ ಲಯ ಕಂಡುಕೊಂಡಿದ್ದೇನೆ.

|ಕೆಎಲ್ ರಾಹುಲ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೇಸಿಂಗ್ ಸುಲಭ
ಆಸ್ಟ್ರೇಲಿಯಾ ವಿರುದ್ಧ 2ನೇ ಟಿ20ಯಲ್ಲಿ 190 ರನ್ ರಕ್ಷಿಸಿಕೊಳ್ಳಲು ವಿಲವಾಗಿದ್ದ ಬಗ್ಗೆ ಪ್ರತಿಕ್ರಿಯಿಸಿದ ಕೆಎಲ್ ರಾಹುಲ್, ‘ಚಿನ್ನಸ್ವಾಮಿಯಲ್ಲಿ ರಾತ್ರಿಯ ವೇಳೆ ಇಬ್ಬನಿ ಸಮಸ್ಯೆ ಇರುವುದರಿಂದ ಚೇಸಿಂಗ್ ಬಹಳ ಸುಲಭ’ ಎಂದರು. 2ನೇ ಇನಿಂಗ್ಸ್‌ನಲ್ಲಿ ಇಬ್ಬನಿ ಸಮಸ್ಯೆ ನೀಡುತ್ತದೆ. ಚಿನ್ನಸ್ವಾಮಿಯಲ್ಲಿ ಹಿಂದೆಯೂ ಇದನ್ನು ನೋಡಿದ್ದೆವು. ಸ್ಟೇಡಿಯಂನ ಇತಿಹಾಸ ತೆಗೆದು ನೋಡಿದರೆ, ಇಲ್ಲಿ ಚೇಸಿಂಗ್ ಬಹಳ ಸುಲಭ. ಹಾಗಂತ ಮ್ಯಾಕ್ಸ್‌ವೆಲ್‌ರ ಶ್ರೇಯವನ್ನು ಗೌಣ ಮಾಡುತ್ತಿಲ್ಲ ಎಂದು ಹೇಳಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...