More

    ಕಾಂಗ್ರೆಸ್, ಸಿಪಿಎಂ ಬಿಜೆಪಿ ಪರ ಕೆಲಸ ಮಾಡ್ತಿದಾರೆ ವೋಟ್​ ಹಾಕ್ಬೇಡ್ರಿ: ಮಮತಾ ಬ್ಯಾನರ್ಜಿ

    ಪಶ್ಚಿಮ ಬಂಗಾಳ: ಕಾಂಗ್ರೆಸ್ ಮತ್ತು ಸಿಪಿಎಂ ಬಿಜೆಪಿ ಪರವಾಗಿ ಕೆಲಸ‌ ಮಾಡುತ್ತಿವೆ. ನೀವೂ ಬಿಜೆಪಿ ಸೋಲಿಸಲು ಬಯಸಿದರೆ ತೃಣಮೂಲ ಕಾಂಗ್ರೆಸ್​ಗೆ ಮತ‌ ನೀಡಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ಇದನ್ನೂ ಓದಿ: ಚುನಾವಣೆ: ನಾಗಾಲ್ಯಾಂಡ್​ನ ಆರು ಜಿಲ್ಲೆಗಳಲ್ಲಿ 0% ಮತದಾನ, ಕಾರಣ ಹೀಗಿದೆ..!

    ಮುರ್ಷಿದಾಬಾದ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುತ್ತಿದ್ದಾರೆ ಎಂಬ ಹೇಳಿಕೆಗೆ ಕಾಂಗ್ರೆಸ್, ಸಿಪಿಐ (ಎಂ) ವಿರುದ್ಧ ತೀವ್ರ ಆಕ್ರೋಶ ವ್ಯಕ್ತಡಿಸಿದರು.​

    ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಮೈತ್ರಿಕೂಟ ರಚನೆ ಮಾಡಿದ್ದು ನಾನು, ಅದಕ್ಕೆ ಹೆಸರು ಸೂಚಿಸಿದ್ದು ನಾನು, ದೇಶದಲ್ಲಿರುವ ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳದಲ್ಲಿಲ್ಲ. ಕಾಂಗ್ರೆಸ್ ಮತ್ತು ಸಿಪಿಎಂ ಬಿಜೆಪಿ ಪರವಾಗಿ ಕೆಲಸ‌ ಮಾಡುತ್ತಿವೆ. ನೀವು ಬಿಜೆಪಿ ಸೋಲಿಸಬೇಕಾದರೆ ಟಿಎಂಸಿಗೆ ಮತ‌ ನೀಡಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.

    ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ ಯಾರ ಜೊತೆಗೂ ಮೈತ್ರಿ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು. ರಾಜ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ “ಪೂರ್ವ ಯೋಜಿತ” ಘಟನೆ. ರಾಮನವಮಿ ಆಚರಣೆಯ ಸಂದರ್ಭದಲ್ಲಿ ಬಿಜೆಪಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.

    ಬಿಜೆಪಿಯು ಮಮತಾ ಬ್ಯಾನರ್ಜಿ ಹೇಳಿಕೆಗೆ ತಿರುಗೇಟು ನೀಡಿದೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿಯನ್ನು ಹೊಣೆಗಾರರನ್ನಾಗಿಸುವ ಮೂಲಕ ಬಂಗಾಳಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾದ ಕಾರಣಕ್ಕೆ ಆಕೆಯನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದೆ.

    ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಹತ್ಯೆ ಪ್ರಕರಣ: ಹೇಳಿಕೆ ನೀಡದಂತೆ ನ್ಯಾಯಾಲಯ​ ನಿರ್ಬಂಧ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts