More

    ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ; ಯಾರೇ ಆದರೂ ದೇಶ ಒಡೆಯುವ ಮಾತು ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: 2024-25ನೇ ಸಾಲಿನ ಮಧ್ಯಂತರ ಬಜೆಟ್​​ಅನ್ನು ಟೀಕಿಸುವ ಭರದಲ್ಲಿ ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಿ ವಿವಾದದ ಕಿಡಿ ಹೊತ್ತಿಸಿರುವ ಸಂಸದ ಡಿ.ಕೆ. ಸುರೇಶ್​ ಅವರ ಹೇಳಿಕೆಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶ ಒಡೆಯುವ ಮಾತು ಸಹಿಸಲ್ಲ ಎಂದು ತಮ್ಮದೇ ಪಕ್ಷದ ಸದಸ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.

    ರಾಜ್ಯಸಭೆ ಕಲಾಪವನ್ನುಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್​ ಇಂದಿರಾ ಹಾಗೂ ರಾಜೀವ್​ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಪಾದಯಾತ್ರೆ ಮೂಲಕ ಅಯೋಧ್ಯೆಗೆ ತೆರಳಿ ಬಾಲರಾಮನಿಗೆ ಭಕ್ತಿ ಸಮರ್ಪಿಸಿದ 350 ಮುಸ್ಲಿಮರು

    ದೇಶ ಒಡೆಯುವ ಮಾತು ಸಹಿಸಲ್ಲ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್​ ಇಂದಿರಾ ಹಾಗೂ ರಾಜೀವ್​ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಅದಾಗ್ಯೂ ಸಂಸದ ಡಿ.ಕೆ. ಸುರೇಶ್​ ಆ ಅರ್ಥದಲ್ಲಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ಈ ವಿಚಾರವಾಗಿ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ. ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

    ಈ ಬಾರಿಯ ಕೇಂದ್ರ ಬಜೆಟ್​​​ನಲ್ಲಿ ಹೊಸತೇನನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವು ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ದಕ್ಷಿಣ ಭಾರತದವರು ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts