ತಿರುಪತಿಯಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿದ್ದೇನೆ: ಬಿಎಸ್​ವೈ

ಬೆಂಗಳೂರು: ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಲಿ. ರಾಜ್ಯದ ಜನರ ಸಂಕಷ್ಟ ಮತ್ತು ರಾಜ್ಯದ ಬರಗಾಲ ನೀಗಲಿ ಎಂದು ತಿರುಪತಿಯಲ್ಲಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ಡಾಲರ್ಸ್​ ಕಲೊನಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನಗಳನ್ನು ಬಿಜೆಪಿ ಗೆಲ್ಲಿಲಿದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಸಿಎಂ ಕುಮಾರಸ್ವಾಮಿ ಅವರು, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವರದಿಗಳನ್ನು ತರಿಸಿಕೊಳ್ಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಂದೊಂದು ಮಾಧ್ಯಮಗಳು ಒಂದೊಂದು ರೀತಿಯ ವರದಿ ನೀಡುತ್ತಿವೆ. ಮೇ 23ರಂದು ಫಲಿತಾಂಶ ಬಂದ ನಂತರ ಎಲ್ಲವೂ ತಿಳಿಯಲಿದೆ ಎಂದರು. (ದಿಗ್ವಿಜಯ ನ್ಯೂಸ್​)