ಲೋಕಸಭೆ ಚುನಾವಣೆಯ ಫಲಿತಾಂಶಗಳು ಅನಿರೀಕ್ಷಿತ, ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇನೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆ 2019ರ ಫಲಿತಾಂಶಗಳು ತೀರಾ ಅನಿರೀಕ್ಷಿತ. ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇನೆ. ಅಭೂತಪೂರ್ವ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸರಣಿ ಟ್ವೀಟ್​ ಮಾಡಿರುವ ಅವರು, ಜೆಡಿಎಸ್​ ಮತ್ತು ಕಾಂಗ್ರೆಸ್​ ಮೈತ್ರಿಕೂಟದ ಅನಿರೀಕ್ಷಿತ ಸೋಲಿಗೆ ಕಾರಣ ಏನೆಂಬುದನ್ನು ಉಭಯ ಪಕ್ಷಗಳ ನಾಯಕರು ಒಟ್ಟಾಗಿ ಕುಳಿತು ಚರ್ಚಿಸಲಿದ್ದಾರೆ. ನಮ್ಮ ಪಕ್ಷ ಸಾಕಷ್ಟು ಗೆಲುವು ಸೋಲುಗಳನ್ನು ಕಂಡಿದೆ. ಆದ್ದರಿಂದ, ಪಕ್ಷದ ಕಾರ್ಯಕರ್ತರು ಧೈರ್ಯಗೆಡುವು ಅವಶ್ಯಕತೆ ಇಲ್ಲ. ಎಲ್ಲರೂ ಒಂದಾಗಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸೋಣ ಎಂದು ಹೇಳಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರವಾಗಿ ದಿನವಹಿ ದುಡಿದು, ಸಹಕರಿಸಿದ ಉಭಯ ಪಕ್ಷಗಳ ಎಲ್ಲ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.