Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಐಟಿ ದಾಳಿ, ಬಾತ್​ರೂಂನಲ್ಲಿ ಅಡಗಿಸಿಟ್ಟಿದ್ದ ಅಪಾರ ನಗದು ವಶ

Saturday, 10.12.2016, 6:36 PM       No Comments

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಚಿತ್ರದುರ್ಗದ 15 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಚಿತ್ರದುರ್ಗದಲ್ಲಿ ಬಾತ್​ರೂಂನಲ್ಲಿ ರಹಸ್ಯವಾಗಿ ಅಡಗಿಸಿಟ್ಟಿದ್ದ 2 ಸಾವಿರ ರೂ. ಮುಖಬೆಲೆಯ 5.7 ಕೋಟಿ ರೂ., 100 ರೂ. ಮುಖಬೆಲೆಯ 90 ಲಕ್ಷ ರೂ. ಮತ್ತು 4 ಕೆ.ಜಿ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಐಟಿ ಅಧಿಕಾರಿಗಳು ಹವಾಲ ದಂಧೆಯಲ್ಲಿ ತೊಡಗಿದ್ದವರ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಪರಶುರಾಮ್ ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ಬಾತ್​ರೂಂನಲ್ಲಿ ರಹಸ್ಯ ಲಾಕರ್ ಅನ್ನು ಪತ್ತೆ ಹಚ್ಚಿದ್ದಾರೆ. ರಹಸ್ಯ ಲಾಕರ್​ನಲ್ಲಿ 5.7 ಕೋಟಿ ರೂ. ಹೊಸ ನೋಟು, 90 ಲಕ್ಷ ರೂ. ಹಳೆಯ ನೋಟು ಮತ್ತು ಚಿನ್ನ ಪತ್ತೆಯಾಗಿದೆ. ಐಟಿ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2000 ರೂ. ಮುಖಬೆಲೆಯ 5.88 ಲಕ್ಷ ರೂ. ನಗದನ್ನು ರಾಣಿಬೆನ್ನೂರಿನ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top