More

    ತೆಲಂಗಾಣ ಚುನಾವಣೆ; ಕಾಂಗ್ರೆಸ್​ ಅಭ್ಯರ್ಥಿ ಮನೆ ಮೇಲೆ IT ದಾಳಿ

    ಹೈದರಾಬಾದ್: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ಮಧ್ಯೆ ಕಾಂಗ್ರೆಸ್​ ಅಭ್ಯರ್ಥಿ ಶ್ರೀನಿವಾಸ್​ ರೆಡ್ಡಿ ಮನೆ ಮೇಲೆ ಆದಾಯ ತೆರಿಗೆ(IT) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಖಮ್ಮಂ ಜಿಲ್ಲೆಯ ಪಲೈರ್​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಶ್ರೀನಿವಾಸ್​ ರೆಡ್ಡಿ ಮನೆ ಮೇಲೆ ಐಟಿ ದಾಳಿಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

    ಶ್ರೀನಿವಾಸ್ ರೆಡ್ಡಿ ಇಂದು (ನವೆಂಬರ್ 09) ಪಲೈರ್​ ವಿಧಾನಸಭಾ ಕ್ಷೇದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತ ಶ್ರೀನಿವಾಸ್ ರೆಡ್ಡಿ ಮನೆ ಮೇಲೆ ಐಟು ದಾಳಿಯಾಗಿರುವುದನ್ನು ಖಂಡಿಸಿರುವ ಕಾಂಗ್ರೆಸ್​ ನಾಯಕರು ಅವರ ಮನೆ ಹಾಗೂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

    P Srinivas Reddy

    ಇದನ್ನೂ ಓದಿ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ; BSF​ ಯೋಧ ಹುತಾತ್ಮ

    ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀನಿವಾಸ್​ ರೆಡ್ಡಿ ತಮ್ಮ ಮನೆ ಮೇಲೆ ಐಟಿ ಹಾಗೂ ಇಡಿ ದಾಳಿಯಾಗುವ ಸಂಭವವಿದೆ. ಕಳೆದ ಕೆಲವು ದಿನಗಳಿಂದ ತನಿಖಾ ಸಂಸ್ಥೆಗಳು ಕಾಂಗ್ರೆಸ್​ ಅಭ್ಯರ್ಥಿಗಳ ಮನೆ ಹಾಗೂ ಕಚೇರಿಯನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಆಡಳಿತರೂಡ ಬಿಆರ್​ಎಸ್​ ಹಾಗೂ ಬಿಜೆಪಿ ಒಳಮೈತ್ರಿ ಮಾಡಿಕೊಂಡಿದ್ದು, ಈ ದಾಳಿಯ ಹಿಂದೆ ಈ ಎರಡು ಪಕ್ಷಗಳ ಕೈವಾಡವಿದೆ ಎಂದು ಆರೋಪಿಸಿದ್ದರು.

    ಕಾಂಗ್ರೆಸ್​ ಅಭ್ಯರ್ಥಿ ಶ್ರೀನಿವಾಸ್​ ರೆಡ್ಡಿ ಆರೋಪ ಮಾಡಿದ ಬೆನ್ನಲ್ಲೇ ಅವರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇದು ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ. ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂದಬರು ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts