16 C
Bangalore
Saturday, December 7, 2019

ಜಾಗತಿಕ ನಕ್ಷೆಯಲ್ಲಿ ಅಳಿಸಲಾಗದ ಹೆಜ್ಜೆ ಮೂಡಿಸಿದೆ ನವಭಾರತ, ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ: ಅಮಿತ್​ ಷಾ ಟ್ವೀಟ್​

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನವ ಭಾರತದ ಶಕ್ತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಷ್ಟು ಶಕ್ತಿಯುತವಾಗಿದೆ ಎಂಬುದಕ್ಕೆ ಹೌಡಿ ಮೋದಿ ಸಮಾರಂಭ ಸಾಕ್ಷಿಯಾಯಿತು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಹೇಳಿದರು.

ಟೆಕ್ಸಾಸ್​ನ ಹ್ಯೂಸ್ಟನ್​ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೊನಾಲ್ಡ್​ ಟ್ರಂಪ್​ ಇಬ್ಬರೂ ಭಾಷಣ ಮಾಡಿದ ಬಳಿಕ ಅಮಿತ್​ ಷಾ ಸರಣಿ ಟ್ವೀಟ್​ ಮೂಲಕ ಹೌಡಿ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಬಲವನ್ನು ಪ್ರತಿನಿಧಿಸಿದ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದರು.

ನಮ್ಮ ದೇಶದ ಪ್ರಧಾನಿ ಮೋದಿಯವರ ಜನಪ್ರಿಯತೆ ಜಗತ್ತಿನಾದ್ಯಂತ ಪಸರಿಸಿದೆ. ಇದು ಭಾರತದ ಜನರಿಗೆ ಸಿಕ್ಕ ಮನ್ನಣೆ. ನರೇಂದ್ರ ಮೋದಿಯವರು ಶಕ್ತಿಯುತ ಭಾರತವನ್ನು ಪ್ರತಿನಿಧಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ಭಾರತ ಅನಾವರಣ ಪ್ರತಿಯೊಬ್ಬ ಭಾರತೀಯನ ಕನಸು ಆಗಿತ್ತು ಎಂದು ಅಮಿತ್​ ಷಾ ಟ್ವೀಟ್​ ಮಾಡಿದ್ದಾರೆ.

ಹೌಡಿ ಮೋದಿ ಜಾಗತಿಕ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದೆ. ಎರಡು ಶಕ್ತಿಶಾಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶಗಳ ನಾಯಕರು ಜಗತ್ತಿನ ಒಳಿತಿಗಾಗಿ ತಮ್ಮ ಕನಸು, ಯೋಜನೆಗಳನ್ನು ಪರಸ್ಪರ ಹಂಚಿಕೊಂಡಿದ್ದಾರೆ. ಇಂಥ ಸಂದರ್ಭ ಹಿಂದೆಂದೂ ಒದಗಿಬಂದಿರಲಿಲ್ಲ. ಹೌಡಿ ಮೋದಿ ಒಂದು ಅಭೂತಪೂರ್ವ ಯಶಸ್ಸು. ಜಾಗತಿಕ ನಕ್ಷೆಯಲ್ಲಿ ನವ ಭಾರತದ ಒಂದು ಅಳಿಸಲಾಗದ ಹೆಜ್ಜೆ ಎಂದು ಬಣ್ಣಿಸಿದರು.

ನಮ್ಮ ದೇಶದ ರಕ್ಷಣೆ ಮತ್ತು ಏಕತೆಗೆ ಒಂದೇ ಒಂದು ಸಣ್ಣ ತೊಡಕು ಆಗಲೂ ಅವಕಾಶ ಕೊಡುವುದಿಲ್ಲ ಎಂಬುದು ನವ ಭಾರತದ ಸ್ಪಷ್ಟ ಹಾಗೂ ದೃಢವಾದ ಧ್ವನಿ. ಭಯೋತ್ಪಾದನೆ ವಿರುದ್ಧ ಉಗ್ರ ಹೋರಾಟ ಮಾಡುತ್ತಿರುವ ಭಾರತದ ಪರ ಇಡೀ ವಿಶ್ವ ನಿಂತಿದೆ. ಇದಕ್ಕೆ ಕಾರಣವಾದ ನರೇಂದ್ರ ಮೋದಿಯವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಷಾ ತಿಳಿಸಿದ್ದಾರೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...