ಗೆದ್ದಿರುವ ಎಲ್ಲ ಸಂಸತ್​ ಸದಸ್ಯರು ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಹೃತ್ಪೂರ್ವಕ ಅಭಿನಂದನೆಗಳು: ಎಚ್​ಡಿಡಿ

ಬೆಂಗಳೂರು: ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಸೋಲನುಭವಿಸಿದ್ದರೂ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹತಾಶರಾಗಿಲ್ಲ. ಫೀನಿಕ್ಸ್​ ಹಕ್ಕಿಯಂತೆ ಮತ್ತೆ ಪುಟಿದೇಳುವ ಉತ್ಸಾಹದಲ್ಲೇ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಎಲ್ಲ ಸಂಸತ್​ ಸದಸ್ಯರು ಮತ್ತು ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಟ್ವೀಟ್​ ಮಾಡಿದ್ದಾರೆ.

ತುಮಕೂರಿನಲ್ಲಿ ನನ್ನ ಪರವಾಗಿ ಕೆಲಸ ಮಾಡಿದ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್​ ಕಾರ್ಯಕರ್ತರೆಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಲು ಬಯಸುತ್ತೇನೆ. ನಮಗೆ ಸೋಲಾಗಿದ್ದರೂ ಸಮಾಜ ಸುಧಾರಣೆಯ ಕಾರ್ಯವನ್ನು ಅಬಾಧಿತವಾಗಿ ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.

ಚುನಾಯಿತ ಸಂಸತ್​ ಸದಸ್ಯರಿಗೂ ಅಭಿನಂದನೆಗಳು. ಎನ್​ಡಿಎ ಮೈತ್ರಿಕೂಟದ ಭಾರಿ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.

Leave a Reply

Your email address will not be published. Required fields are marked *