More

    ಹರ್​ ಘರ್​ ತಿರಂಗ; ಮತ್ತೆ ರಾಷ್ಟ್ರಧ್ವಜ ಹಾರಿಸಲು ಕರೆಕೊಟ್ಟ ಮೋದಿ

    ನವದೆಹಲಿ: ಭಾರತೀಯ ಜನತಾ ಪಕ್ಷವು ಕಳೆದ ವರ್ಷ ಆರಂಭಿಸಿದ್ದ ಹರ್​ ಘರ್ ತಿರಂಗ ಅಭಿಯಾನ ಈ ವರ್ಷವೂ ಮುಂದುವರಿಯಲಿದ್ದು, ಆ ಕುರಿತು ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಇಂದು ಕರೆ ನೀಡಿದ್ದಾರೆ.

    ರಾಷ್ಟ್ರಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯನ್ನು ಸಂಕೇತಿಸುತ್ತದೆ. ಪ್ರತಿ ಭಾರತೀಯನೂ ರಾಷ್ಟ್ರಧ್ವಜದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾನೆ. ದೇಶದ ಪ್ರಗತಿಗೆ ಇನ್ನಷ್ಟು ಪರಿಶ್ರಮ ವಹಿಸುವ ನಿಟ್ಟಿನಲ್ಲಿ ರಾಷ್ಟ್ರಧ್ವಜ ನಮಗೆ ಸ್ಫೂರ್ತಿ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

    ಇದನ್ನೂ ಓದಿ: ಲೆಫ್ಟಿಗಳಿಗೆಂದೇ ವಿಶೇಷ ಹೆಲ್ಮೆಟ್​: ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗ’

    ಅಲ್ಲದೆ ಈ ವರ್ಷವೂ ಎಲ್ಲರೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಇದೇ ಆ. 13ರಿಂದ ಆ. 15ರ ಅವಧಿಯಲ್ಲಿ ಮನೆ ಮೇಲೆ ರಾಷ್ಟ್ಟ ಧ್ವಜ ಹಾರಿಸುವ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ. ರಾಷ್ಟ್ರಧ್ವಜದೊಂದಿಗೆ ನಿಮ್ಮ ಚಿತ್ರವನ್ನು ವೆಬ್​ಸೈಟ್​​ನಲ್ಲಿ ಅಪ್​ಲೋಡ್ ಮಾಡುವಂತೆಯೂ ಪ್ರಧಾನಿ ಮೋದಿ ಮನವಿ ಮಾಡಿಕೊಂಡಿದ್ದಾರೆ.

    ಡಾ.ರಾಜ್ ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರ ಸಾವು; ಕಾರಣ ತಿಳಿಯಲು ಸದ್ಯದಲ್ಲೇ ಅಷ್ಟಮಂಗಲ ಪ್ರಶ್ನೆ!

    ಮದುವೆ ಫೋಟೋಗ್ರಫಿಗೆ ಹೋದವಳು ವರನೊಂದಿಗೇ ಅಫೇರ್ ಇಟ್ಟುಕೊಂಡಳು​; ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ ವಧು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts