More

    ದೇಶದ್ರೋಹಿಗಳಿಗೆ ಕಂಡಲ್ಲಿ ಗುಂಡು ಕಾನೂನು ಜಾರಿಗೊಳಿಸಲು ಕೇಂದ್ರಕ್ಕೆ ಮನವಿ ಮಾಡ್ತೇನೆ: ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

    ಬೆಂಗಳೂರು: ಯಾರಾದರೂ ದೇಶದ್ರೋಹಿ ಘೋಷಣೆ ಕೂಗಿದರೆ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕಾಗಿ ಶೂಟ್ ಅಟ್ ಸೈಟ್ ಕಾನೂನು ಜಾರಿಗೊಳಿಸುವುದಕ್ಕೆ ಮನವಿ ಮಾಡುತ್ತೇನೆ ಎಂದು ಸಚಿವ ಬಿ.ಸಿ.ಪಾಟೀಲ್ ಸೋಮವಾರ ಹೇಳಿದ್ದಾರೆ.

    ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಭಾರತದ ವಿರುದ್ಧ ಘೋಷಣೆ ಕೂಗುವವರ ವಿರುದ್ಧ ಕಂಡಲ್ಲಿ ಗುಂಡು ಹಾರಿಸಲು ಪೂರಕವಾಗಿರುವ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಕೆಲವು ಯುವಜನರಿಗೆ ಇದು(ದೇಶದ್ರೋಹಿ ಘೋಷಣೆ ಕೂಗುವುದು, ರಾಷ್ಟ್ರದ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು) ಫ್ಯಾಷನ್ ಆಗಿದೆ. ಈ ಮೂಲಕ ಜನಪ್ರಿಯತೆ ಗಳಿಸುವ ಹುಚ್ಚಿಗೆ ಬಿದ್ದಿದ್ದಾರೆ ಅವರು. ಈ ವಿಧದ ನಡವಳಿಕೆಯಿಂದ ದೇಶ ಹಾಗೂ ದೇಶಭಕ್ತಿ ಹಾಳಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

    ಇತ್ತೀಚೆಗೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಈಗ ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯಾ ಲಿಯೋನಾ ಮತ್ತು ಅಂಥವರ ನಡವಳಿಕೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಪಾಟೀಲ್ ಮೇಲಿನ ಪ್ರತಿಕ್ರಿಯೆ ನೀಡಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts