5 ವರ್ಷ ನಾನೇ CM, ಸರ್ಕಾರ ಬಂಡೆ ತರ ಇರುತ್ತೆ : ಸಿದ್ರಾಮಯ್ಯ

dk - 2025-07-02T133633.141
Published on

5 ವರ್ಷ ನಾನೇ CM, ಸರ್ಕಾರ ಬಂಡೆ ತರ ಇರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದರು. 5 ವರ್ಷವೂ ನಾನೇ ಈ ರಾಜ್ಯದ ಸಿಎಂ ಆಗಿರುತ್ತಾನೆ. ನಿಮಗ್ಯಾಕೆ ಅನುಮಾನ ಬಂದಿದೆ? ಎಂದು ಪ್ರಶ್ನೆ ಮಾಡಿದರು.

ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು. ಸತ್ಯ ಎನ್ನುವುದೇ ಅವರಿಗೆ ಗೊತ್ತೆ ಇಲ್ಲ. ನಮ್ಮ ಪಕ್ಷದವರೂ ಒಟ್ಟಾಗಿದ್ದೇವೆ. 5 ವರ್ಷ ನಾನೇ ಸಿಎಂ ಆಗಿರುವೆ. ನಮ್ಮ ಸರ್ಕಾರ ಬಂಡೆ ತರ ಇರುತ್ತದೆ ಎಂದರು.

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನೂ ಮಾಡಿಲ್ಲ. ಏನಾದರೂ ಮಾಡಿದ್ದರೆ ಸಾಕ್ಷಿ ಗುಡ್ಡೆ ಕೊಡಲಿ. ನಾಲ್ಕು ವರ್ಷ ಅಧಿಕಾರದಲ್ಲಿದ್ದರು, ಕುಮಾರಸ್ವಾಮಿ ಅವರೊಂದಿಗೆ ಸಮ್ಮಿಶ್ರ ಸರಕಾರ ನಡೆಸಿದ್ದರೂ, ಯಾವುದೇ ಕ್ಷೇತ್ರದಲ್ಲೂ ಏನೂ ಕೆಲಸ ಮಾಡಿಲ್ಲ. ಸುಮ್ಮನೆ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡಿದ್ದಾರೆ.

ಮುಂದಿನ ಐದು ವರ್ಷ ನಾನೆ ಸಿಎಂ ಆಗಿ ಮುಂದುವರಿಯುತ್ತೇನೆ. ಆರ್. ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಏನು ನಮ್ಮ ಹೈಕಮಾಂಡಾ? ಅವರೆಲ್ಲ ಬಿಜೆಪಿಯವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net