More

    ಉಪ್ಪು ತಿಂದವನು ಯಾರೇ ಆಗಿದ್ದರೂ ನೀರು ಕುಡಿಯಲಿ: ಆರೋಪದ ವಿರುದ್ಧ ಕಾನೂನು ಕ್ರಮ: ಸಚಿವ ಡಾ.ಅಶ್ವತ್ಥನಾರಾಯಣ

    ಬೆಂಗಳೂರು: ನಾನು ಜನಸೇವಕನಾಗಲು ರಾಜಕಾರಣಕ್ಕೆ ಬಂದವನು. ನನ್ನ ಜೀವನ ಅತ್ಯಂತ ಪಾರದರ್ಶಕವಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬರುತ್ತಿರುವುದನ್ನು ನೋಡಿಕೊಂಡೇ ವಿರೋಧಿಗಳು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಕಿಂಚಿತ್ತೂ ಹುರುಳಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಹೇಳಿದ್ದಾರೆ.

    ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

    ಸತೀಶ್ ಅವರು ನನ್ನ ಅಣ್ಣ ಎನ್ನುವುದು ನಿಜ. ಆದರೆ, ಈ ದರ್ಶನ್ ಗೌಡ ಯಾರೆನ್ನುವುದೂ ನನಗೆ ಗೊತ್ತಿಲ್ಲ. ನಾನು ಅವನನ್ನು ನೋಡಿಯೂ ಇಲ್ಲ. ನನ್ನ ಸಾಧನೆಗಳನ್ನು ಸಹಿಸಿಕೊಳ್ಳಲು ವಿರೋಧಿಗಳಿಗೆ ಆಗುತ್ತಿಲ್ಲ. ಹೀಗಾಗಿ ಮಸಿ ಮೆತ್ತುವ ಕೀಳು ಮಟ್ಟಕ್ಕೆ ಇಳಿದಿದ್ದಾರೆ’ ಎಂದರು.

    ಸಮಾಜದಲ್ಲಿ ಬೇರೂರಿರುವ ಭ್ರಷ್ಟಾಚಾರವನ್ನು ಕಿತ್ತೆಸೆಯಬೇಕೆಂದು ಹೇಳುವವನು ನಾನು. ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ಶಾಮೀಲಾಗಿರುವವರನ್ನು ಕೂಡ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಈಗಾಗಲೇ ವಿಚಾರಣೆ ಆರಂಭವಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು. ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆಯನ್ನು ಯಾರು ಬೇಕಾದರೂ ಪರಿಶೀಲಿಸಬಹುದು, ಮಾಧ್ಯಮಗಳು ಇದರತ್ತ ಗಮನ ಹರಿಸಬೇಕು ಎಂದರು.

    ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ: ಸಚಿವ ಅಶ್ವಥ್​ ನಾರಾಯಣಗೆ ಡಿ.ಕೆ. ಶಿವಕುಮಾರ್ ಹೀಗಂದಿದ್ದು ಯಾಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts