IAF ವಿಂಗ್ ಕಮಾಂಡರ್ ವಿರುದ್ಧ ಲೈಂಗಿಕ ಆರೋಪ; ದೂರು ದಾಖಲು

ಶ್ರೀನಗರ: ಭಾರತೀಯ ವಾಯುಪಡೆಯ ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾ ಅಧಿಕಾರಿಯೊಬ್ಬರು ವಿಂಗ್‌ ಕಮಾಂಡರ್‌ ಮೇಲೆ ಅತ್ಯಾಚಾರ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇಬ್ಬರೂ ಅಧಿಕಾರಿಗಳು ಶ್ರೀನಗರದಲ್ಲಿ ನೆಲೆಸಿದ್ದಾರೆ.

ಇದನ್ನೂ ಓದಿ: Viral Video: ಗೋಡೌನ್​ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕ ಸಾವು, ನಾಲ್ವರ ಸ್ಥಿತಿ ಗಂಭೀರ; ವಿಡಿಯೋ ವೈರಲ್

ಪ್ರಕರಣ ದಾಖಲಾಗುತ್ತಿದ್ದಂತೆ ಸ್ಥಳೀಯ ಬುಡ್ಗಾಮ್ ಠಾಣೆಯ ಪೊಲೀಸರು ವಾಯುಪಡೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ವಾಯುಪಡೆಯ ಅಧಿಕಾರಿಗಳು ಸಹ ಅಧಿಕಾರಿಗಳ ವಿಚಾರಣೆಗೆ ಸಹಕಾರ ನೀಡಿರುವುದಾಗಿ ವರದಿಯಾಗಿದೆ. ಕಳೆದ ಎರಡು ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇನೆ ಎಂದು ಫ್ಲೈಯಿಂಗ್‌ ಸ್ಕ್ವಾಡ್‌ನ ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

IAF ವಿಂಗ್ ಕಮಾಂಡರ್ ವಿರುದ್ಧ ಲೈಂಗಿಕ ಆರೋಪ; ದೂರು ದಾಖಲು

ದೂರಿನಲ್ಲಿ ಏನಿದೆ?: 2023ರ ಡಿಸೆಂಬರ್ 31 ರಂದು ಮಧ್ಯರಾತ್ರಿ ಹೊಸ ವರ್ಷದ ಪಾರ್ಟಿ ವೇಳೆ ವಿಂಗ್ ಕಮಾಂಡರ್ ತನಗೆ ಉಡುಗೊರೆ ನೀಡುವುದಾಗಿ ತನ್ನ ಕೋಣೆಗೆ ಕರೆದುಕೊಂಡು ಹೋದರು. ಈ ವೇಳೆ ಮಹಿಳೆ ನಿಮ್ಮ ಕುಟುಂಬ ಎಲ್ಲಿದೆ ಎಂದು ಕೇಳಿದಾಗ, ಪುರುಷ ಅಧಿಕಾರಿ ಅವರು ಬೇರೆಡೆ ನೆಲೆಸಿದ್ದಾರೆ ಎಂದಿದ್ದರು. ಆ ದಿನ ರಾತ್ರಿ ತನ್ನೊಂದಿಗೆ ಸಂಭೋಕ್ಕೆ ಒತ್ತಾಯಿಸಿ, ಕಿರುಕುಳ ನೀಡಿದರು. ನಾನೂ ಇದು ಸರಿಯಿಲ್ಲ ಎಂದು ಪದೇ ಪದೇ ಹೇಳಿದೆ. ಸಾಧ್ಯವಾದಷ್ಟು ವಿರೋಧಿಸಲು ಪ್ರಯತ್ನಿಸಿದೆ, ಆದರೆ ಅವರು ನನ್ನ ಮಾತು ಕೇಳದೇ ಮೇಲೆರಗಲು ಬಂದರು. ಆಗ ನಾನು ಅವರನ್ನು ತಳ್ಳಿ ಅಲ್ಲಿಂದ ಓಡಿ ಹೋದೆ. ಇದಾದ ನಂತರ ಅವರ ಕುಟುಂಬದೊಂದಿಗೆ ಮತ್ತೆ ಭೇಟಿಯಾಗೋಣ ಎಂದು ಕೇಳಿದ್ದರು. ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಕಿರುಕುಳ ನೀಡುತ್ತಿದ್ದರು.

ಆತನಿಂದ ನನ್ನ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದೆ. ನಿರಂತರ ಭಯದಲ್ಲಿ ಬದುಕುತ್ತಿದ್ದೇನೆ. ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಯೋಚಿಸಿದ್ದೆ. ಇದರಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಬಹಳ ಸಮಯದಿಂದ ಈ ಚಿತ್ರಹಿಂದೆ ಸಹಿಸಿಕೊಂಡಿದ್ದೇನೆ. ಕೊನೆಗೆ ವಿಧಿಯಿಲ್ಲದೇ ದೂರು ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅನೇಕ ಸಂರ್ಭಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರನ್ನು ಭೇಟಿ ಮಾಡಿದ ಎಂ.ಬಿ. ಪಾಟೀಲ್​; ರಾಜ್ಯದ ಬೇಡಿಕೆಗಳ ಕುರಿತು ಚರ್ಚೆ

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…