

ನವದೆಹಲಿ : ಕರೊನಾ ವಿರುದ್ಧದ ಹೋರಾಟದಲ್ಲಿ ಭಾರತೀಯ ವಾಯುಪಡೆಯು ದೇಶದ ಬೆಂಬಲಕ್ಕೆ ನಿಂತಿದೆ. ವೈದ್ಯಕೀಯ ಸಾಮಗ್ರಿಗಳನ್ನು ಮತ್ತು ಸಿಬ್ಬಂದಿಗಳನ್ನು ಅಗತ್ಯವಿರುವ ಸ್ಥಳಗಳಿಗೆ ಶೀಘ್ರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದೆ.
ಐಎಎಫ್ ಟ್ರಾನ್ಸ್ಪೋರ್ಟ್ ಫ್ಲೀಟ್(ಸಾರಿಗೆ ಪಡೆ), ದೇಶದ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ಮತ್ತು ಶುಶ್ರೂಷಾ ಕೇಂದ್ರಗಳಿಗೆ ಅಗತ್ಯವಾದ ವೈದ್ಯಕೀಯ ಸಿಬ್ಬಂದಿ, ನಿರ್ಣಾಯಕ ಉಪಕರಣಗಳು ಮತ್ತು ಔಷಧಿಗಳನ್ನು ಏರ್ಲಿಫ್ಟ್ ಮಾಡಿ ಸಾಗಿಸಲು ಸಹಾಯ ಮಾಡುತ್ತಿದೆ ಎಂದು ವಾಯುಪಡೆ ತನ್ನ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.