ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ

mng-2sep-aikala harish shetty
Published on


ಮಂಗಳೂರು : ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ.ಸಿ. ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸೆ.7ರಂದು ಮುಂಬೈಯ ಗೋರೆಗಾಂವ್ ಪೂರ್ವದ
ಜಯಲೀಲಾ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಸಹಿತ ನೂರಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಐಕಳ ಅವರ ಸಮಾಜ ಸೇವೆ, ಸಂಘಟನಾ ಚತುರತೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net