More

    ಐಎಎಸ್​ ಟಾಪರ್ಸ್​ ದಂಪತಿ ಬದುಕಲ್ಲಿ ಬಿರುಗಾಳಿ: ಡಿವೋರ್ಸ್​ಗೆ ಅರ್ಜಿ..!

    ನವದೆಹಲಿ: ಐಎಎಸ್ ಟಾಪರ್ಸ್​ ದಂಪತಿ ಟೀನಾ ಡಾಬಿ ಮತ್ತು ಅಥರ್​ ಖಾನ್​ ಜೈಪುರ ಕೌಟುಂಬಿಕ ನ್ಯಾಯಾಲಯದಲ್ಲಿ ಶುಕ್ರವಾರ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದಾರೆ.

    2015ರ ಬ್ಯಾಚ್​ನ ಐಎಎಸ್​ ಪರೀಕ್ಷೆಯಲ್ಲಿ ಟೀನಾ ಡಾಬಿ ಟಾಪರ್ ಆದರೆ, ಕಾಶ್ಮೀರ ಮೂಲದ ಅಥರ್​​ ಖಾನ್​ ಅವರು ಎರಡನೇ ರ್ಯಾಂಕ್​ ಪಡೆದಿದ್ದರು. ತರಬೇತಿ ಸಮಯದಲ್ಲಿ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರು 2018ರಲ್ಲಿ ವಿವಾಹವಾಗಿದ್ದರು. ಇಬ್ಬರು ಸಹ ರಾಜಸ್ಥಾನ ಕೇಡರ್​ನ ಅಧಿಕಾರಿಗಳಾಗಿದ್ದು, ಜೈಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಇದನ್ನೂ ಓದಿ: ಕದ್ದ ಮಗು 80 ಸಾವಿರ ರೂ.ಗೆ ಮಾರಾಟ; ಹತ್ತು ದಿನಗಳ ಬಳಿಕ ಆರೋಪಿಗಳ ಸೆರೆ

    ಪರಸ್ಪರ ಒಪ್ಪಿಗೆ ಮೇರೆಗೆ ಜೈಪುರದ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಟೀನಾ ಡಾಬಿ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಮುಂದೆ ಖಾನ್ ಎಂಬ​ ಸರ್​ನೇಮ್​ ತೆಗೆದು ಹಾಕಿದಾಗಿನಿಂದ ಇಬ್ಬರ ನಡುವಿನ ವಿವಾಹ ಸಂಬಂಧ ಕುರಿತು ಸಾಕಷ್ಟು ಸುದ್ದಿಯಾಗಿತ್ತು. ಅದೇ ಸಮಯದಲ್ಲಿ ಅಥರ್​ ಸಹ ಇನ್​ಸ್ಟಾಗ್ರಾಂನಲ್ಲಿ ಟೀನಾ ಅವರನ್ನು ಅನ್​ಫಾಲೋ ಮಾಡಿದ್ದು, ಇಬ್ಬರ ನಡುವೆ ಯಾವುದೂ ಸರಿಯಿಲ್ಲ ಎಂಬುದಕ್ಕೆ ಪುಷ್ಠಿ ನೀಡಿತ್ತು.

    ಇನ್ನು ಟೀನಾ ಡಾಬಿ ಮತ್ತು ಅಥರ್​ ಖಾನ್​ ಮದುವೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೆಲವರು ದಂಪತಿಗೆ ಶುಭಕೋರಿದರೆ, ಹಿಂದು ಮಹಾಸಭಾ, ಐಎಎಸ್​ ಅಧಿಕಾರಿಗಳಿಬ್ಬರ ಮದುವೆಯನ್ನು ಲವ್​ ಜಿಹಾದ್ ಎಂದು​ ಕರೆದಿದ್ದರು. (ಏಜೆನ್ಸೀಸ್​)

    ಗುಡಿಸಲಿನಲ್ಲಿ ವಾಸವಿದ್ದ ಬಡ ಸ್ನೇಹಿತನಿಗೆ ಹೊಸ ಮನೆ ಉಡುಗೊರೆ ನೀಡಿದ ಸ್ಕೂಲ್​ ಫ್ರೆಂಡ್ಸ್​..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts