ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಭಾರತಕ್ಕೆ ಮೊದಲ ಎದುರಾಳಿ ಯಾರು ಗೊತ್ತಾ?

ಕ್ರೈಸ್ಟ್‌ಚರ್ಚ್: ಕರೊನಾ ವೈರಸ್ ಹಾವಳಿಯಿಂದಾಗಿ 2021ರಿಂದ 2022ಕ್ಕೆ ಮುಂದೂಡಿಕೆಯಾಗಿರುವ ಮಹಿಳೆಯರ ಏಕದಿನ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದೆ. 2022ರ ಮಾರ್ಚ್ 4ರಿಂದ ಏಪ್ರಿಲ್ 3ರವರೆಗೆ ನ್ಯೂಜಿಲೆಂಡ್‌ನ 6 ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದ್ದು, ಹಾಲಿ ರನ್ನರ್‌ಅಪ್ ಭಾರತ ತಂಡ 2022ರ ಮಾರ್ಚ್ 6ರಂದು ಅರ್ಹತಾ ತಂಡವೊಂದರ ವಿರುದ್ಧ ಸೆಣಸುವ ಮೂಲಕ ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ. 8 ತಂಡಗಳ ಟೂರ್ನಿ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದ್ದು, ಲೀಗ್ ಹಂತದ ಬಳಿಕ ಅಗ್ರ 4 ತಂಡಗಳು ಸೆಮಿಫೈನಲ್‌ಗೇರಲಿವೆ. … Continue reading ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಭಾರತಕ್ಕೆ ಮೊದಲ ಎದುರಾಳಿ ಯಾರು ಗೊತ್ತಾ?