ನವದೆಹಲಿ: ಭಾರತ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತೋರಿದ ಸಾಧನೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) 2015ರಲ್ಲೇ ಹಾಲ್ ಆಫ್ ಫೇಮ್ಗೆ ಸೇರ್ಪಡೆಗೊಳಿಸಿತು, ಇದೀಗ ಕನ್ನಡಿಗನ ಸಾಧನೆಯನ್ನು ಮೆಲುಕು ಹಾಕಿರುವ ಐಸಿಸಿ, ಅನಿಲ್ ಕುಂಬ್ಳೆ ಸಾಧನೆ ಒಳಗೊಂಡ ವಿಡಿಯೋವೊಂದನ್ನು ಗುರುವಾರ ಬಿಡುಗಡೆಗೊಳಿಸಿದೆ. ಐಸಿಸಿ ತನ್ನ ಅಧಿಕೃತ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಬಿಡುಗಡೆಗೊಳಿಸಿದೆ. ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿರುವ 3ನೇ ಬೌಲರ್ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅಹರ್ನಿಶಿ ಟೆಸ್ಟ್ ಪಂದ್ಯವಾಡಲಿದೆ ಭಾರತ ಮಹಿಳಾ ತಂಡ, ಮೊದಲ ಎದುರಾಳಿ ಯಾರು ಗೊತ್ತ
ಅನಿಲ್ ಕುಂಬ್ಳೆ ಕುರಿತು ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಹಾಗೂ ನ್ಯೂಜಿಲೆಂಡ್ ಮಾಜಿ ನಾಯಕ ಸ್ಟೀನ್ ಫ್ಲೆಮಿಂಗ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅನಿಲ್ ಕುಂಬ್ಳೆ ಎಷ್ಟೋ ದಿನಗಳ ಕಾಲ ನನ್ನ ನಿದ್ದೆ ಕಸಿದಿದ್ದಾರೆ. ಅನಿಲ್ ಕುಂಬ್ಳೆ ಶೈಲಿಯಲ್ಲಿ ಬೌಲಿಂಗ್ ಮಾಡುವುದು ತುಂಬಾ ಕಷ್ಟಕರ ಎಂದು ಸಂಗಕ್ಕರ ಹೇಳಿದ್ದಾರೆ. ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳಿಂದ 619 ವಿಕೆಟ್ ಕಬಳಿಸಿದ್ದು, 35 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. 271 ಏಕದಿನ ಪಂದ್ಯಗಳಿಂದ 337 ವಿಕೆಟ್ ಪಡೆದಿದ್ದಾರೆ.
ಇದನ್ನೂ ಓದಿ:ಭಾರತ ತಂಡಕ್ಕೆ ಕೋಚ್ ಆಗಲಿದ್ದಾರೆಯೇ ಕನ್ನಡಿಗ ರಾಹುಲ್?,
ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಮೂರನೇ ಬೌಲರ್ ಎನಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹಾಗೂ ಆಸ್ಟ್ರೆಲಿಯಾದ ಶೇನ್ ವಾರ್ನೆ ಮೊದಲ ಎರಡು ಸ್ಥಾನದಲ್ಲಿದ್ದಾರೆ. ಅನಿಲ್ ಕುಂಬ್ಳೆ ಅಲ್ಲದೆ, ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಮಾಟಿರ್ನ್ ಕ್ರೋವೆ ಸಾಧನೆಯ ಕುರಿತು ಮಾಹಿತಿ ಹಂಚಿಕೊಂಡಿದೆ.
https://www.instagram.com/tv/CPGH5P9BtM8/?utm_source=ig_web_copy_link