ನವದೆಹಲಿ: ಭಾರಿ ನಿರೀಕ್ಷೆ ಹುಟ್ಟು ಹಾಕಿರುವ ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿಯ(ICC Champions Trophy) ಟೀಮ್ ಇಂಡಿಯಾದ ಆಟಗಾರರ ಪಟ್ಟಿ ಜ.18ರಂದು ಬಿಡುಗಡೆ ಮಾಡುವುದಾಗಿ ಬಿಸಿಸಿಐ ಹೇಳಿದೆ. ಇದೀಗ ಸಂಭಾವ್ಯ ಆಟಗಾರರ ಪಟ್ಟಿ ಬಗ್ಗೆ ಬಿಸಿಸಿಐ ಅಧಿಕಾರಿಗಳು ಮಾಹಿತಿ ನೀಡಿದ್ದು, ಯಾರೆಲ್ಲ ತಂಡದಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದೆ.
ಇದನ್ನೂ ಓದಿ: ಸಿಕೆಪಿಯಲ್ಲಿ 18ರಿಂದ ಕಲಾಕೃತಿಗಳ ಪ್ರದರ್ಶನ, ಮಾರಾಟ : ಲಲಿತಾಕಲಾ ಅಕಾಡೆಮಿ ಆಯೋಜನೆ
ಹೌದು, ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ಯುಎಇಯಲ್ಲಿ ಮೂರು ಸ್ಥಳಗಳಲ್ಲಿ ನಡೆಯಲಿದೆ. ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಶನಿವಾರ(ಜ.19) ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,ಅಧಿಕೃತವಾಗಿ 15 ಆಟಗಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಸಾವಿನಲ್ಲೂ ಒಂದಾದ ದಂಪತಿ : ಪತಿ ಮರಣದ ತಾಸುಗಳ ಮಧ್ಯೆ ಕುಸಿದುಬಿದ್ದು ಪತ್ನಿ ಮೃತ್ಯು
ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಆಯ್ಕೆ ಸಮಿತಿಯು ಶುಕ್ರವಾರ ಸಂಜೆ ವರ್ಚುವಲ್ ಚರ್ಚೆ ನಡೆಸಲು ಸಭೆ ನಡೆದಿದೆ ಎನ್ನಲಾಗಿದೆ. ಇವರು ಪಟ್ಟಿ ತಯಾರಿಸಿದ್ದಾರೆ. ಈ ಪಟ್ಟಿಯಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬ ಕುತೂಹಲ ಮೂಡಿದ್ದು, ಇದೀಗ ಯಾರು ಪಟ್ಟಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.
ಇದನ್ನೂ ಓದಿ: 2032ಕ್ಕೆ ಭಾರತ ವಿಶ್ವದ 3ನೇ ಅತಿದೊಡ್ಡ ರಾಷ್ಟ್ರ: ಕೆ. ಉಲ್ಲಾಸ್ ಕಾಮತ್ ಅಭಿಮತ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಸಾಮಾನ್ಯ ಆಟಗಾರರು ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ, ಜಸ್ಪ್ರೀತ್ ಬುಮ್ರಾ ಕೂಡ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸಿವೆ. ಆದರೆ, ಬುಮ್ರಾ ಟೂರ್ನಿಯಲ್ಲಿ ಭಾಗವಹಿಸುವುದು ಫಿಟ್‌ನೆಸ್‌ಗೆ ಸಂಬಂಧಿಸಿದೆ ಎಂದು ವರದಿಯಾಗಿದೆ.
ಕರುಣ್ ನಾಯರ್ ಮತ್ತು ಸಂಜು ಸ್ಯಾಮ್ಸನ್ ಔಟ್
ಭಾರತದ ಪ್ರಮುಖ ಏಕದಿನ ಪಂದ್ಯಾವಳಿಯಾದ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ ಕರುಣ್ ನಾಯರ್ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಸೇರಿಸಿಕೊಳ್ಳಲು ಆಯ್ಕೆದಾರರು ಹಿಂಜರಿಯುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ಕಾರಣ ಅಧಿಕಾರಿಗಳು ತಿಳಿಸಿಲ್ಲ. ಅಲ್ಲದೆ, ಸಂಜು ಸ್ಯಾಮ್ಸನ್ ಕೂಡ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ವರದಿಯಾಗಿದೆ.(ಏಜೆನ್ಸೀಸ್)