More

    ಏಕದಿನ ವಿಶ್ವಕಪ್ 2023| ಟಾಸ್​ ಗೆದ್ದು ಬ್ಯಾಟಿಂಗ್​​ ಆಯ್ದುಕೊಂಡ ಆಸ್ಟ್ರೇಲಿಯಾ; ಶುಭಮಾನ್​ ಬದಲು ಕಣಕ್ಕಿಳಿಯಲಿದ್ದಾರೆ ಈ ಆಟಗಾರ

    ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅತಿಥೇಯ ಭಾರತದ ವಿರುದ್ಧ ಟಾಸ್​ ಗೆದ್ದು ಆಸ್ಟ್ರೇಲಿಯಾ ಬ್ಯಾಟಿಂಗ್​ ಆಯ್ದುಕೊಂಡಿದೆ. ಡೆಂಘೆ ಜ್ವರದಿಂದ ಬಳಲುತ್ತಿರುವ ಓಪನಿಂಗ್ ಬ್ಯಾಟ್ಸ್​ಮನ್ ಶುಭಮಾನ್​ ಗಿಲ್​ರನ್ನು ಈ ಪಂದ್ಯದಿಂದ ಹೊರಗುಳಿದಿದ್ದಾರೆ.

    ಚೆನ್ನೈನ ಚೆಪಾಕ್​ ಅಂಗಳದಲ್ಲಿ ಒಟ್ಟು 14 ಏಕದಿನ ಪಂದ್ಯಗಳನ್ನು ಆಡಿರುವ ಭಾರತ 7ರಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಕಾರಣಾಂತರಗಳಿಂದ ರದ್ದುಗೊಂಡಿದೆ. ಚೆಪಾಕ್​ನಲ್ಲಿ ಆರು ಏಕದಿನ ಪಂದ್ಯಗಳನ್ನು ಆಡಿರುವ ಆಸ್ಟ್ರೇಲಿಯಾ ಐದರಲ್ಲಿ ಗೆದ್ದಿದೆ.

    ಡೆಂಘೆ ಜ್ವರದಿಂದ ಬಳಲುತ್ತಿರುವ ಶುಭಮಾನ್ ಗಿಲ್​ ಬದಲಿಗೆ ಆರಂಭಿಕನಾಗಿ ಇಶಾನ್​ ಕಿಶನ್​ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 25 ಏಕದಿನ ಪಂದ್ಯಗಳನ್ನಾಡಿರುವ ಇಶಾನ್​ ಕಿಶನ್​ 44.3 ಸರಾಸರಿಯಲ್ಲಿ 102.43 ಸ್ಟ್ರೈಕ್​ರೇಟ್​ನಲ್ಲಿ 886 ರನ್​ ಗಳಿಸಿದ್ಧಾರೆ. ಇದರಲ್ಲಿ ಒಂದು ದ್ವಿಶತಕವು ಒಳಗೊಂಡಿದೆ.

    ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಮೃತರ ಸಂಖ್ಯೆ 15ಕ್ಕೆ ಏರಿಕೆ

    ಏಕದಿನ ಕ್ರಿಕೆಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ 149 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 56 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 83 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

    ಭಾರತ ಪ್ಲೇಯಿಂಗ್​ Xl: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್, ಶಾರ್ದೂಲ್ ಠಾಕೂರ್.

    ಆಸ್ಟ್ರೇಲಿಯಾ ಪ್ಲೇಯಿಂಗ್​ Xl: ಪ್ಯಾಟ್ ಕಮ್ಮಿನ್ಸ್ (ಸಿ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆಷ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts