More

    ಆದರ್ಶ ಜೀವನ ನಡೆಸಲು ಜ್ಞಾನ ಅತ್ಯವಶ್ಯ

    ಸವದತ್ತಿ: ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ. ಆದರ್ಶ ಬದುಕಿಗೆ ಜ್ಞಾನದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಭವಿಷ್ಯದ ಗುರಿ ಸಾಧಿಸಬೇಕು ಎಂದು ಶಾಸಕ ಆನಂದ ಮಾಮನಿ ಹೇಳಿದ್ದಾರೆ.

    ಪಟ್ಟಣದ ಮಾಮನಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ ಎಸ್.ಜಿ.ಶಿಂತ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸಿ.ಎಂ.ಮಾಮನಿ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಎಸ್.ಜಿ.ಶಿಂತ್ರಿ ಸ್ವತಂತ್ರ ಪಿಯು ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದಿ.ಚಂದ್ರಶೇಖರ ಮಾಮನಿ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
    ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಕನ್ನಡ ಮಾಧ್ಯಮದಲ್ಲಿ ಕಲಿತು ಐಪಿಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಅವರಂತೆ ಪ್ರತಿ ವಿದ್ಯಾರ್ಥಿ ಸಾಧನೆ ಮಾಡಬೇಕು. ಹಿರಿಯ ಶ್ರೇಣಿಯ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

    ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪಾಲಕರು ಮಕ್ಕಳಿಗೆ ಒತ್ತಡ ಹೇರದೆ ಅವರಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ಮಕ್ಕಳಿಗೆ ವಸ್ತುವಿನ ಬೆಲೆಯ ಬಗ್ಗೆ ಅರಿವಿರುವುದಿಲ್ಲ. ಪಾಲಕರು ಅದನ್ನು ಮನವರಿಕೆ ಮಾಡಿಕೊಟ್ಟು ಅವರ ಅವಶ್ಯಕತೆಯನ್ನು ಪೂರೈಸಬೇಕು. ಗ್ರಾಮೀಣ ಭಾಗದ ಮಕ್ಕಳು ಪುಸ್ತಕದ ಜ್ಞಾನದ ಜತೆಗೆ ಸಾಮಾನ್ಯ ಜ್ಞಾನವನ್ನು ಹೊಂದಿರುತ್ತಾರೆ. ಶಿಕ್ಷಕರು ಅವರಿಗೆ ಸಹಕಾರ ನೀಡಬೇಕು. ವಿದ್ಯಾರ್ಥಿಗಳು ಅವಕಾಶದ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಲಕ್ಷ್ಮಣ ನಿಂಬರಗಿ ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗಂಗಮ್ಮತಾಯಿ ಚಂದ್ರಶೇಖರ ಮಾಮನಿ, ಉಮೇಶ್ವರ ಶಿವಾಚಾರ್ಯ ಸ್ವಾಮೀಜಿ ಜಗದೀಶ್ ಶಿಂತ್ರಿ, ಎಂ.ಬಿ.ಏಣಗಿ, ಕೇಶವ ಪೆಟ್ಲೂರ,ಎನ್.ಸಿ.ಬೆಂಡಿಗೇರಿ, ಜಯಶ್ರೀ ಕಾಡಣ್ಣವರ, ವಿಜಯಲಕ್ಷ್ಮೀ ದೊಡಮನಿ, ಶಿಕ್ಷಕರು ಸಿಬ್ಬಂದಿ ಮತ್ತು ಪಾಲಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts