

ನವದೆಹಲಿ: ಇಸ್ರೇಲ್ ಹಾಗೂ ಹಮಾಸ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಇಸ್ರೇಲ್ ರಕ್ಷಣಾ ಪಡೆಗಳು ಹಮಾಸ್ ಸಂಸತ್ತನನ್ನು ವಶಪಡಿಸಿಕೊಂಡಿವೆ.
ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ಇಸ್ರೇಲ್ ರಕ್ಷಣಾ ಪಡೆ ಗೋಲಾನಿ ಬ್ರಿಗೇಡ್ ಸೋಮವಾರ ಹಮಾಸ್ ಸಂಸತ್ ಕಟ್ಟಡವನ್ನು ವಶಪಡಿಸಿಕೊಂಡಿದೆ. ಹಮಾಸ್ ಸಂಸತ್ತಿನಲ್ಲಿ ಇಸ್ರೇಲ್ ಸೈನಿಕರು ಬಾವುಟವನ್ನು ಹಾರಿಸುತ್ತಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಕ್ಟೋಬರ್ 27ರಂದು ಶುರುವಾದ ಇಸ್ರೇಲ್ ಹಾಗೂ ಹಮಾಸ್ ನಡುವಿನ ಸಂಘರ್ಷ ಸ್ಥಿರವಾದ ಪ್ರಗತಿಯನ್ನು ಸಾಧಿಸಿದ್ದು, ಉತ್ತರ ಗಾಜಾದಲ್ಲಿನ ಪ್ರಮುಖ ಆಸ್ಪತ್ರೆಗಳನ್ನು ಹಮಾಸ್ ತನ್ನ ಕಮಾಂಡ್ ಸೆಂಟರ್‌ಗಳಾಗಿ ಬಳಸುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಹಮಾಸ್ನ ಮಾಜಿ ಗುಪ್ತಚರ ಮುಖ್ಯಸ್ಥ ಖಾಮಿಸ್ ದಬಾಬಾಶ್ ಸೇರಿದಂತೆ ಹಲವರನ್ನು ಕೊಂದಿರುವುದಾಗಿ ಇಸ್ರೇಲ್ ತಿಳಿಸಿದೆ.
ಆಸ್ಪತ್ರೆಯನ್ನು ಕಮಾಂಡ್ ಸೆಂಟರ್ ಆಗಿ ಬಳಸುತ್ತಿರುವ ಹಮಾಸ್ ರೋಗಿಗಳನ್ನು ಒತ್ತೆಯಾಳುಗಳನ್ನಾಗಿಸಿಕೊಂಡು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ಈ ರೀತಿಯ ಕೆಟ್ಟ ಪ್ರಯೋಗಗಳು ಯಾವತ್ತಿಗೂ ಸಹ ಫಲ ಕೊಡುವುದಿಲ್ಲ. ಇದಕ್ಕೆ ತಕ್ಕ ಪ್ರತಿಪಲ ಅನುಭವಿಸಬೇಕಾಗುತ್ತದೆ ಎಂದು ಇಸ್ರೇಲ್ ಸೇನೆಯ ಮುಖ್ಯಸ್ಥರು ಎಚ್ಚರಿಸಿದ್ದಾರೆ.