More

    ಇಡುಕ್ಕಿ ಭೂಕುಸಿತದ ಭೀಕರತೆ; ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆದ ರಕ್ಷಣಾ ಸಿಬ್ಬಂದಿ

    ಇಡುಕ್ಕಿ: ಮುನ್ನಾರ್​ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರಗೆ ತೆಗೆಯಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

    ಆಗಸ್ಟ್​ 7ರಂದು ಈ ಭೀಕರ ಭೂಕುಸಿತ ಸಂಭವಿಸಿದೆ. ಅಂದಿನಿಂದಲೂ ಎನ್​ಡಿಆರ್​ಎಫ್​ ಸಿಬ್ಬಂದಿ ಸೇರಿ ಹಲವರು ಮಣ್ಣಿನಡಿ ಇರುವ ಶವಗಳನ್ನು ತೆಗೆಯುವ ಕಾರ್ಯಾಚರಣೆ ನಡೆಸುತ್ತಿವೆ. ದಿನೇದಿನೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕೇಂದ್ರ ಸಚಿವ ವಿ. ಮುರಳಿಧರನ್​ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೂಕುಸಿತದಲ್ಲಿ ಮೃತರಾದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ ಹೆಚ್ಚುತ್ತಿದೆ ಭಯ; ಇಂದು ನಾಲ್ವರು ರಾಜೀನಾಮೆ

    ಇವರೆಲ್ಲ ಟೀ ಎಸ್ಟೇಟ್​​ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದರು. ಅಲ್ಲಿದ್ದ ಸಾಲುಸಾಲು ಮನೆಗಳು ನೆಲಸಮವಾಗಿದ್ದು ದುರಂತವೇ ಸರಿ. ಕೇರಳ ಮುಂದುವರಿದ ರಾಜ್ಯ. ಆದರೆ ಈ ಕಾರ್ಮಿಕರ ಸಾವು ಸರ್ಕಾರದ ಕಣ್ಣು ತೆರೆಸುವಂತಿದೆ. ಇನ್ನಾದರೂ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತದೆ ನಂಬಿಕೆ ನನಗೆ ಇದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ:  ಜೋಡಿ ದುರಂತ ಕೇರಳಕ್ಕೆ ಆಘಾತ: 2 ಹೋಳಾದ ವಿಮಾನ, ಭೂಕುಸಿತಕ್ಕೆ 13 ಮಂದಿ ಜೀವಂತ ಸಮಾಧಿ

    ಮೃತರ ಕುಟುಂಬಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾಗೇ ಪ್ರಧಾನಿ ಮೋದಿಯವರೂ ಸಹ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದಾರೆ.
    ಇಡುಕ್ಕಿಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಯಾವುದೇ ಸಹಾಯ ಬೇಕಿದ್ದರೂ ನಾವು ಮಾಡಲು ಸಿದ್ಧರಿದ್ದೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳಿನಿಸ್ವಾಮಿ ಹೇಳಿದ್ದಾರೆ. (ಏಜೆನ್ಸೀಸ್​)

    ಮುನ್ನಾರ್​ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 23ಕ್ಕೆ ಏರಿಕೆ; ಅವಶೇಷದಡಿಯಿಂದ 5 ಶವಗಳು ಹೊರಕ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts