More

    ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುತ್ತು

    • ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ಮನವಿ ಮಾಡಿದರು.
    • ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಪಾಳ್ಯ, ಕೊತ್ತನೂರು, ತೆಳ್ಳನೂರು, ಸಿಂಗನಲ್ಲೂರು, ಕಾಮಗೆರೆ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಕಾಂಗ್ರೆಸ್ ಮುಖಂಡರೊಂದಿಗೆ ಅಭ್ಯರ್ಥಿ ಪರ ಮತಯಾಚನೆ ಮಾಡಿ ಮಾತನಾಡಿದರು.
    • ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಹನೂರು ಕ್ಷೇತ್ರದಲ್ಲಿ ಅಧಿಕ ಮತಗಳನ್ನು ನೀಡುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಮತಗಳನ್ನು ನಮ್ಮ ಅಭ್ಯರ್ಥಿಗೆ ನೀಡಿ ಗೆಲ್ಲಿಸಿಕೊಳ್ಳಬೇಕು. ದಿ.ಆರ್.ಧ್ರುವನಾರಾಯಣ ಅವರು ನಮ್ಮನ್ನು ಅಗಲಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇದೀಗ ಅವರ ಸ್ಥಾನವನ್ನು ತುಂಬಲು ಸುನೀಲ್ ಬೋಸ್ ಬಂದಿದ್ದು ನಾವೆಲ್ಲರೂ ಅವರ ಕೈ ಬಲ ಪಡಿಸಬೇಕಿದೆ ಎಂದರು.
    • ದೇಶದಲ್ಲಿ 10 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಿಜೆಪಿ ನಾಯಕರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುತ್ತು ಬರುತ್ತದೆ. ಈ ಬಗ್ಗೆ ಜನ ಸಾಮಾನ್ಯರಿಗೆ ಕಾಂಗ್ರೆಸ್ ಕಾರ್ಯಕರ್ತರು ಹೇಳಬೇಕಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಜನ ಪರವಾದ 5 ಗ್ಯಾರಂಟಿಗಳನ್ನು ನೀಡಿ ಜನರ ವಿಶ್ವಾಸಗಳಿಸಿದೆ.
    • ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಹೇಳಿದರು.
    • ಏ.12ಕ್ಕೆ ಬಹಿರಂಗ ಸಭೆ:
    • ಕೊಳ್ಳೇಗಾಲದಲ್ಲಿ ಏ.12ಕ್ಕೆ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ, ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವಿರ್ ಸೇಠ್, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಹನೂರು ಕ್ಷೇತ್ರದಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.
    • ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕಂದ ವರ್ಮ, ಮಹದೇವ ಗೌಡ, ಸತ್ತೇಗಾಲ ಗ್ರಾಪಂ ಅಧ್ಯಕ್ಷ ಶಿವಶಂಕರ್, ಸದಸ್ಯ ಮಲ್ಲೇಶ್, ರಾಜ್ಯ ಬಿಜೆಪಿ ಯುವ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೈರಾಜು, ಮುಖಂಡ ಪಾಳ್ಯ ಕೃಷ್ಣ, ಉಗನೀಯ ಮೌಲ, ರಾಜಗೋಪಾಲ್, ಗಂಗಾಧರ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts