

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್(Congress) ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದ ಮಾದರಿಯಲ್ಲೆ ಮಹಿಳೆಯರಿಗೆ ಪ್ರತಿ ತಿಂಗಳಿಗೆ 2,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಸೋಮವಾರ ಘೋಷಿಸಿದೆ.
ಕೆಲ ದಿನಗಳಿಂದೆ ಆಮ್ ಆದ್ಮಿ ಪಕ್ಷ(ಎಎಪಿ) ಕೂಡ ಸತತ ನಾಲ್ಕನೇ ಅವಧಿಗೆ ಅಧಿಕಾರಿಕ್ಕೆ ಬಂದರೆ 2100 ರೂ. ನೀಡಲಾಗುವುದು ಎಂದು ಹೇಳತ್ತು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್ ನೇತೃತ್ವದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ‘ಪ್ಯಾರಿ ದೀದಿ ಯೋಜನೆ’ ಜಾರಿ ಮೂಲಕ ಭರವಸೆ ನೀಡಿದರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಈಗಾಗಲೇ ಕರ್ನಾಟಕದ ಮಹಿಳೆಯರಿಗೆ 2,000 ರೂ. ಮಾಸಿಕ ಭತ್ಯೆಯನ್ನು ನೀಡಲು ಪ್ರಾರಂಭಿಸಿದೆ. ಅದೇ ರೀತಿ ಕಾಂಗ್ರೆಸ್ ಸರ್ಕಾರ ರಚಿಸಿದಾಗ ದೆಹಲಿಯಲ್ಲಿ ಭತ್ಯೆಯನ್ನೂ ನೀಡುತ್ತೇವೆ ಎಂದು ಯಾದವ್ ಹೇಳಿದರು.
ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಇದುವರೆಗೆ 48 ಅಭ್ಯರ್ಥಿಗಳನ್ನು ಘೋಷಿಸಿದ್ದು, ಉಳಿದ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ.
ಡಿಸೆಂಬರ್ 18 ರಂದು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯ ಬಡ ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ನೀಡುವ ಯೋಜನೆಯನ್ನು ದೆಹಲಿ ಕ್ಯಾಬಿನೆಟ್ ಅನುಮೋದಿಸಿದ್ದಾರೆ ಎಂದು ಘೋಷಿಸಿದರು , 2025 ರ ವಿಧಾನಸಭಾ ಚುನಾವಣೆಯ ನಂತರ ಪಾವತಿಯನ್ನು 2,100 ರೂ. ಹೆಚ್ಚಿಸಲಾಗುವುದು ಎಂದು ಹೇಳಿದರು.(ಏಜೆನ್ಸೀಸ್).