More

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಂಚನ್ಯಾಯ

    ಎನ್.ಆರ್.ಪುರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸರ್ಕಾರ ಪಂಚನ್ಯಾಯ ಜಾರಿಗೆ ತರಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

    ತಾಲೂಕು ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ 5 ಗ್ಯಾರಂಟಿಗಳ ರೀತಿಯಲ್ಲಿ ಪಂಚ ನ್ಯಾಯ ನೀಡಲಿದೆ. ಪ್ರತಿ ವಿದ್ಯಾವಂತ ಯುವಕನಿಗೆ 1 ಲಕ್ಷ ರೂ. ನೀಡುವ ಯುವ ನ್ಯಾಯ, ರೈತ ಸಾಲ ಮನ್ನಾ, ಬೆಂಬಲ ಬೆಲೆ ನೀಡುವ ರೈತ ನ್ಯಾಯ, ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ 1 ಲಕ್ಷ ರೂ. ನೀಡುವ ಮಹಿಳಾ ನ್ಯಾಯ, ದಿನಕ್ಕೆ 400 ರೂ. ಕನಿಷ್ಠ ವೇತನ ನೀಡುವ ಶ್ರಮಿಕ ನ್ಯಾಯ, ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಖಚಿತಪಡಿಸಿಕೊಳ್ಳಲು ಜಾತಿಗಣತಿ ಮಾಡಿ ಪಾಲುದಾರಿಕೆಯ ನ್ಯಾಯ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
    ಕೇಂದ್ರದ ಗ್ಯಾರಂಟಿ ಕಾರ್ಡ್ ವಿತರಿಸುವ ಜತೆಗೆ ರಾಜ್ಯ ಸರ್ಕಾರದ ಐದು ಯೋಜನೆಗಳ ಕುರಿತು ಮನೆ ಮನೆಗೆ ಭೇಟಿ ನೀಡಿ ಯಾವ ಯೋಜನೆ ಸೌಲಭ್ಯ ಪಡೆಯುತ್ತಿದ್ದಾರೆ. ಸೌಲಭ್ಯ ದೊರೆಯದಿದ್ದರೆ ಅದನ್ನು ಕೊಡಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿ ಮತ ಯಾಚಿಸಲಾಗುವುದು ಎಂದರು.
    ಜಿಲ್ಲೆಯಲ್ಲಿ ಕಂದಾಯ ಮತ್ತು ಅರಣ್ಯ ಸಮಸ್ಯೆಬಗೆಹರಿಸುವ ನಿಟ್ಟಿನಲ್ಲಿ ಜಂಟಿ ಸಮೀಕ್ಷೆ ಕೈಗೊಳ್ಳಲಾಗಿದೆ. ಒತ್ತುವರಿ ಜಮೀನನ್ನು 30 ವರ್ಷದವರೆಗೆ ಗುತ್ತಿಗೆ ನೀಡುವ ಪದ್ಧತಿ ಸರ್ಕಾರ ಜಾರಿಗೊಳಿಸಿದೆ. ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಲು ಅರಣ್ಯ ಮತ್ತು ಕಂದಾಯ ಇಲಾಖೆಯ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಜನಪರ ಕಾಳಜಿ ಉಳ್ಳ, ಪ್ರಾಮಾಣಿಕ ಕೆ.ಜಯಪ್ರಕಾಶ್ ಹೆಗ್ಡೆ ಗೆದ್ದರೆ ಜಿಲ್ಲೆಯ ಹಲವು ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ತಿಳಿಸಿದರು.
    ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳಲ್ಲಿ ಕಾರ್ಯಕರ್ತರ ಸಭೆ ಪೂರ್ಣಗೊಳಿಸಲಾಗಿದೆ. ಎರಡನೇ ಹಂತದಲ್ಲಿ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮುಖಂಡರು ಮನೆ ಮನೆಗೆ ತೆರಳಿ ಸರ್ಕಾರದ ಯೋಜನೆಗಳ ಕುರಿತು ಮತದಾರರಿಗೆ ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.
    ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಶಾಸಕರಾಗಿ, ಮಂತ್ರಿಯಾಗಿ, ಸಂಸದರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಪ್ರಾಮಾಣಿಕ, ಸರಳ, ಸಜ್ಜನ. ಇಂಥವರು ಸಂಸದರಾಗುವುದು ಕ್ಷೇತ್ರಕ್ಕೆ ಒಳಿತು. ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿಲ್ಲ. ಹಾಗಾಗಿ ಬಿಜೆಪಿ ಕಾರ್ಯಕರ್ತರೇ ಅವರ ವಿರುದ್ಧ ಗೋ ಬ್ಯಾಕ್ ಶೋಭಾ ಅಭಿಯಾನ ಆರಂಭಿಸಿದರು ಎಂದರು.
    ತಾಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಗೇರ್‌ಬೈಲ್ ನಟರಾಜ್, ಮುಖಂಡರಾದ ಪ್ರಶಾಂತ್ ಶೆಟ್ಟಿ, ಆರ್.ಸದಾಶಿವ, ಎಸ್.ಡಿ.ರಾಜೇಂದ್ರ, ಎಚ್.ಎಂ.ಮನು, ಮಾಳೂರುದಿಣ್ಣೆ ರಮೇಶ್, ಗಿರೀಶ್, ಸುನೀಲ್‌ಕುಮಾರ್, ಎಲ್ದೋಸ್, ಸುಬ್ರಹ್ಮಣ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts