More

    ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕ್ರಮ ಕೈಗೊಂಡರೆ ಬೀದಿಗಿಳಿದು ಹೋರಾಟ

    ಮಂಗಳೂರು: ಅಕ್ರಮ ಗೋಹತ್ಯೆಗೆ ಹಾಗೂ ಮತಾಂತರ ತಡೆದ ಸಂಘಪರಿವಾರದ ಕಾರ್ಯಕರ್ತರನ್ನು ಗುರಿಯಾಗಿಸಿ ಕಾಂಗ್ರೆಸ್ ಸರ್ಕಾರವು ಪೋಲೀಸ್ ಇಲಾಖೆಯ ಮೂಲಕ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕ್ರಮ ಕೈಗೊಂಡರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

    ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳ ಶಕ್ತಿಯನ್ನು ದಮನಿಸುವ ಕೆಲಸವಾಗುತ್ತಿದೆ. ಸಂಘಪರಿವಾರದ ಕಾರ್ಯಕರ್ತರು ದೇವರು ಮೆಚ್ಚುವ ಕೆಲಸ ಮಾಡಿದ್ದಾರೆ. ಹಿಂದು ಸಂಸ್ಕೃತಿಯನ್ನು ಉಳಿಸುವ ಕಾರ್ಯ ಮಾಡಿದ್ದಾರೆ. ಗೋರಕ್ಷಣೆಗೆ ಕಾಯ್ದೆ ಇದ್ದರೂ ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿಲ್ಲ. ಹಾಗೆಂದು ಹೋರಾಟ ಮಾಡಿದವರ ವಿರುದ್ಧವೇ ಕೇಸು ದಾಖಲಿಸಲಾಗುತ್ತಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಡಿಪಾರು, ಗೂಂಡಾ ಕಾಯ್ದೆ ಜಾರಿಗೊಳಿಸುತ್ತಿದೆ. ಇಂತಹ ನಿರ್ಧಾರವನ್ನು ಪೊಲೀಸ್ ಇಲಾಖೆ ವಾಪಸ್ ಪಡೆಯಬೇಕು. ಗಾಂಜಾ ಮತ್ತಿತರ ಕೃತ್ಯಗಳಲ್ಲಿ ತೊಡಗಿಕೊಂಡವರ ಜತೆ ಪರಿವಾರದ ಕಾರ್ಯಕರ್ತರನ್ನು ಹೋಲಿಸಬಾರದು, ಅದರ ಬದಲು ದುಷ್ಕೃತ್ಯ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಿ, ಸಂಘಪರಿವಾರ ಕಾರ್ಯಕರ್ತರ ವಿರುದ್ಧ ಅಲ್ಲ ಎಂದರು.

    ರಾಜ್ಯದಲ್ಲಿ ಭೀಕರ ಬರಗಾಲ ಇದ್ದು, 800ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕುಡಿವ ನೀರಿಗೂ ಹಾಹಾಕಾರ ಇದೆ. ಬೆಂಗಳೂರಿನಲ್ಲಿ ಉದ್ಯೋಗಿಗಳು ನೀರಿಲ್ಲದೆ ಊರಿಗೆ ಗುಳೆ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಉಪಮುಖ್ಯಮಂತ್ರಿಗಳು ತಮ್ಮದೇ ಜಿಲ್ಲೆಗೆ ಸೀಮಿತವಾದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಬರ ನಿರ್ವಹಣೆಗೆ ವಿಶೇಷ ಅನುದಾನ ನೀಡುವುದಾಗಲೀ, ಪ್ರತ್ಯೇಕ ಸಭೆ ನಡೆಸುವುದಾಗಲೂ ಯಾವುದನ್ನೂ ಸರ್ಕಾರ ಮಾಡುತ್ತಿಲ್ಲ. ಮೇಕೆದಾಟು ವಿಚಾರದಲ್ಲಿ ತಮಿಳ್ನಾಡಿಗೆ ಪೂರಕವಾಗಿ ಸರ್ಕಾರ ವರ್ತಿಸುತ್ತಿದೆ. ಇದು ರಾಜ್ಯದ ರೈತರಿಗೆ ಮಾಡುವ ದ್ರೋಹವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

    ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಜೆ.ಪೂಜಾರಿ, ಲೋಕಸಭಾ ಚುನಾವಣಾ ಜಿಲ್ಲಾ ಸಂಚಾಲಕ ನಿತೀನ್ ಕುಮಾರ್, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಸಂಜಯ ಪ್ರಭು, ಬಿಜೆಪಿ ಮುಖಂಡ ಭಾಸ್ಕರಚಂದ್ರ ಶೆಟ್ಟಿ ಇದ್ದರು.

    ————–

    ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಅನ್ಯಾಯ

    ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ ರೈತ ಪರ ಯೋಜನೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದ್ದು ರೈತ ವಿರೋಧಿಯಾಗಿ ವರ್ತಿಸುತ್ತಿದೆ. ಬರಗಾಲದ ಬೆಳೆ ನಷ್ಟವನ್ನು ವೈಜ್ಞಾಕವಾಗಿ ಸಮೀಕ್ಷೆ ಮಾಡಿಲ್ಲ. ಕಿಸಾನ್ ಸನ್ಮಾನ್‌ನಡಿ ರಾಜ್ಯ ಸರ್ಕಾರದ 4 ಸಾವಿರ ರು. ಪ್ರೋತ್ಸಾಹಧನವನ್ನು ಸ್ಥಗಿತಗೊಳಿಸಿದೆ. ವಿದ್ಯಾನಿಧಿ ಯೋಜನೆಯನ್ನು ಸ್ಥಗಿತಗೊಳಿಸಿದೆ. ಪ್ರತಿ ಲೀಟರ್ ಹಾಲಿಗೆ 7 ರು. ಪ್ರೋತ್ಸಾಹಧನ ಭರವಸೆ ಈಡೇರಿಸಿಲ್ಲ. ಅವೈಜ್ಞಾನಿಕವಾಗಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಬೆಳೆ ನಿರ್ವಹಣೆಗೆ ರೈತ ಸಂಪದ ಯೋಜನೆಯಡಿ 100 ಕೋಟಿ ರು.ಗಳ ಯೋಜನೆ ಕೈಬಿಟ್ಟಿದೆ. ರೈತ ಕುಟುಂಬಗಳಿಗೆ ನೆರವಾಗುವ 180 ಕೋಟಿ ರು.ಗಳ ಜೀವನ್‌ಜ್ಯೋತಿ ವಿಮಾ ಯೋಜನೆಯನ್ನು ರದ್ದುಗೊಳಿಸಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts