More

    ಹನುಮ ಭಕ್ತರು ಸಿಡಿದೆದ್ದರೆ ಕಾಂಗ್ರೆಸ್ ದೇಶದಿಂದಲೇ ನಿರ್ಮೂಲ: ಸಿಎಂ ಬೊಮ್ಮಾಯಿ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ನಿಷೇಧಿಸುವ ವಿಚಾರ ಪ್ರಸ್ತಾಪಿಸಿರುವುದು ತೀವ್ರ ಟೀಕೆಗೆ ಒಳಗಾಗಿದೆ. ಕಾಂಗ್ರೆಸ್​ನ ಈ ನಿಲುವಿನ ವಿರುದ್ಧ ಆಡಳಿತಾರೂಢ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಮಾತ್ರವಲ್ಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ವಿಚಾರವಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    ಪಿಎಫ್​ಐನಂಥ ಸಂಘಟನೆ ಜೊತೆಗೆ ಬಜರಂಗ ದಳವನ್ನು ಹೋಲಿಸುವುದೇ ದೊಡ್ಡ ಅಪರಾಧ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ ಚಟುವಟಿಕೆ ನಡೆಸುವ ಪಿಎಫ್ಐ ಜೊತೆ ಧರ್ಮ, ಪರಂಪರೆ ಹಾಗೂ ಇತಿಹಾಸವನ್ನು ಗಟ್ಟಿಗೊಳಿಸಲು ಪ್ರಯತ್ನಿಸುತ್ತಿರುವ ಭಜರಂಗದಳವನ್ನು ತುಲನೆ ಮಾಡಿದ್ದಲ್ಲದೆ, ಅದನ್ನು ನಿಷೇಧಿಸುತ್ತೇವೆ ಎನ್ನುವ ಮೂಲಕ ಕಾಂಗ್ರೆಸ್ ದೊಡ್ಡ ತಪ್ಪು ಮಾಡಿದೆ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್​​ಗೆ 30-40 ಸ್ಥಾನ ಅಂತ ಇತ್ತು, ಈಗ ಅಷ್ಟೂ ಬರಲ್ಲ: ಅಣ್ಣಾಮಲೈ

    ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ, ದಕ್ಷಿಣದ ಅಂಜನಾದ್ರಿಯಲ್ಲಿ ಶ್ರೀ ಹನುಮ ಮಂದಿರ ನಿರ್ಮಾಣ ನಮ್ಮ ಭಾರತೀಯ ಜನತಾ ಪಕ್ಷದ ಧ್ಯೇಯವಾಗಿದೆ ಎಂದ ಬೊಮ್ಮಾಯಿ, ರಾಜ್ಯದಲ್ಲಿ ಹನುಮ ಭಕ್ತರು ಸಿಡಿದು ನಿಂತರೆ ಈಗಾಗಲೇ ಅವಸಾನದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಈ ದೇಶದಿಂದ ಕಿತ್ತೆಸೆಯುತ್ತಾರೆ ಎಂದರು.

    ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts