More

    ಮಾನವ ಪ್ರಾಣಿ ಸಂಘರ್ಷ ತಪ್ಪಿಸದಿದ್ದರೆ ಪರಿಸ್ಥಿತಿ ವಿಕೋಪ

    ನಂಜನಗೂಡು: ತಾಲೂಕಿನ ಹೆಡಿಯಾಲ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಬೇಕು, ಇಲ್ಲವಾದಲ್ಲಿ ಬೆಳೆ ಹಾಗೂ ಜೀವಹಾನಿಯಿಂದ ಕಂಗೆಟ್ಟಿರುವ ಜನರು ಅರಣ್ಯ ಇಲಾಖೆ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಎಚ್ಚರಿಕೆ ನೀಡಿದರು.

    ಹುಲಿ ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಮಹದೇವನಗರ ಗ್ರಾಮದ ರೈತ ವೀರಭದ್ರ ಭೋವಿ ಅವರನ್ನು ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಮಾತನಾಡಿದರು.

    ಹೆಡಿಯಾಲ ವ್ಯಾಪ್ತಿಯ ಅರಣ್ಯ ಪ್ರದೇಶದ ಅಂಚಿನಲ್ಲಿ ಕಂದಕ ನಿರ್ಮಾಣ ಹಾಗೂ ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಬಾಕಿ ಉಳಿದಿದ್ದು, ಅರಣ್ಯ ಇಲಾಖೆಯವರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಬೇಕು. ಇಲ್ಲವಾದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ಬೇಸತ್ತಿರುವ ರೈತರು ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ತಿರುಗಿ ಬಿದ್ದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಲಿದೆ. ಮಾನವ ಹಾಗೂ ವನ್ಯಜೀವಿ ಸಂಘರ್ಷದ ಜತೆಗೆ ಅರಣ್ಯ ಇಲಾಖೆ ಜತೆಗೂ ಸಂಘರ್ಷ ಉಂಟಾಗಲಿದೆ. ರೈತರು ಕಷ್ಟಪಟ್ಟು ಬೆಳೆದಿರುವ ಬೆಳೆ ಹಾಗೂ ಅವರ ಜಾನುವಾರುಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭ ಗಾಯಾಳು ರೈತ ವೀರಭದ್ರ ಭೋವಿಗೆ ಆರ್ಥಿಕ ನೆರವು ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts