More

  ನನಗೆ ಅಧಿಕಾರ ಇದ್ದರೆ ವಿ.ಸೋಮಣ್ಣಗೆ ಕಾಂಗ್ರೆಸ್ ಟಿಕೆಟ್ ನೀಡೋದು ನಿಶ್ಚಿತ: ಸಚಿವ ಡಾ.ಎಚ್.ಸಿ. ಮಹದೇವಪ್ಪ

  ಮೈಸೂರು: ಪಕ್ಷಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ನನಗೆ ಅಧಿಕಾರ ಇದ್ದರೆ ನಾನು ವಿ.ಸೋಮಣ್ಣ ಅವರಿಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸುತ್ತಿದ್ದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

  ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಣಸೂರಿನಿಂದ ನಾನು ಹಾಗೂ ವಿ.ಸೋಮಣ್ಣ ಮೈಸೂರಿಗೆ ಬರುವ ಸಂದರ್ಭ ಹಳ್ಳಿಮನೆ ಹೋಟೆಲ್‌ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದೆವು. ಇಬ್ಬರು ಭೇಟಿಯಾದಾಗ ಮಾತನಾ ಡದೆ ಇರೋಕೆ ಆಗುತ್ತಾ?, ಮಾತನಾಡಿದ್ದೇವೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ. ಟಿಕೆಟ್ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಆ ವಿಚಾರದಲ್ಲಿ ನಾನೊಬ್ಬ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎನ್ನುವ ಮೂಲಕ ವಿ.ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಸುಳಿವು ನೀಡಿದರು.

  ರಾಜಕೀಯ ಸೇಡಿಗೋಸ್ಕರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಪ್ರಕರಣವನ್ನು ನಿಯಮ ಬಾಹಿರವಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಇದೀಗ ಸಚಿವ ಸಂಪುಟದಲ್ಲಿ ಚರ್ಚಿಸಿ ಆ ತೀರ್ಮಾನವನ್ನು ಹಿಂಪಡೆದಿದ್ದೇವೆ. ಇದು ಕಾನೂನಾತ್ಮಕವಾದ ವಿಚಾರ. ಅಂದಿನ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆಯುವುದಕ್ಕೂ ಮುನ್ನ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತು. ಆ ಸಂದರ್ಭ ಡಿ.ಕೆ.ಶಿವಕುಮಾರ್ ಶಾಸಕರಾಗಿದ್ದರು. ಶಾಸಕರ ಮೇಲೆ ತನಿಖೆ ನಡೆಯಬೇಕಾದರೆ ವಿಧಾನಸಭೆ ಅಧ್ಯಕ್ಷರ ಅನುಮತಿ ಪಡೆಯಬೇಕು. ಅಡ್ವೊಕೇಟ್ ಜನರಲ್ ವರದಿ ಕೈ ಸೇರುವ ಮುನ್ನ ಮುಖ್ಯಕಾರ್ಯದರ್ಶಿ ತನಿಖೆಗೆ ಅನುಮತಿ ನೀಡಿದ್ದಾರೆ. ಇದೀಗ ಈಗಿನ ಅಡ್ವೊಕೇಟ್ ಜನರಲ್ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಲಾಗಿದೆ. ಎಲ್ಲವನ್ನೂ ಕಾನೂನು ವ್ಯಾಪ್ತಿಯಲ್ಲಿ ನೋಡಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾನೂನು ಬಾಹಿರ ನಿರ್ಧಾರವನ್ನು ನಾವು ಹಿಂಪಡೆದಿದ್ದೇವೆ ಎಂದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts