Rohit Sharma: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮರನ್ನು ದಡೂತಿ ಕ್ರಿಕೆಟಿಗ, ತೂಕ ಇಳಿಸಿಕೊಳ್ಳಬೇಕು ಎಂದೆಲ್ಲಾ ಟೀಕಿಸಿ ಮಾತನಾಡಿರುವ ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್, ಇದೀಗ ತಮ್ಮ ಹೇಳಿಕೆಗಳಿಂದ ಭಾರೀ ವಿವಾದಕ್ಕೆ ಗುರಿಯಾಗಿದ್ದಾರೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಅವರನ್ನು ಟೀಕಿಸುವ ಭರದಲ್ಲಿ ವಿವಾದ ಸುಳಿಗೆ ಸಿಲುಕಿರುವ ಶಮಾ, ಸದ್ಯ ಕ್ರಿಕೆಟ್ ಅಭಿಮಾನಿಗಳು ಸೇರಿದಂತೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಇದೀಗ ಟೀಮ್ ಇಂಟಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಕಿಡಿ ಕಾರಿದ್ದಾರೆ.
ಇದನ್ನೂ ಓದಿ:ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳುವುದು ಹೇಗೆ?; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips
ಯೋಗರಾಜ್ ಸಿಂಗ್ ಹೇಳಿದ್ದೇನು..?
”ನಾನು ಈ ದೇಶದ ಪ್ರಧಾನಿಯಾಗಿದ್ದರೆ, ಇವರನೆಲ್ಲಾ ಗಂಟುಮೂಟೆ ಪ್ಯಾಕ್ ಮಾಡಿಸಿ ದೇಶ ಬಿಡುವಂತೆ ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆ ಎಎನ್ಐನೊಂದಿಗೆ ಮಾತನಾಡಿದ ಯೋಗರಾಜ್ ಸಿಂಗ್, ” ಭಾರತೀಯ ಕ್ರಿಕೆಟಿಗರು ಸೇರಿದಂತೆ ಇಲ್ಲಿನ ಜನರು, ಭೂಮಿ ನನ್ನ ಜೀವಕ್ಕಿಂತ ಹೆಚ್ಚು ಪ್ರೀತಿ ಮಾಡುತ್ತೇನೆ. ರಾಜಕೀಯ ವ್ಯವಸ್ಥೆಯಲ್ಲಿ ಯಾರಾದರೂ ನಮ್ಮ ದೇಶಕ್ಕೆ ಹೆಮ್ಮೆ ತಂದ ಆಟಗಾರರ ಬಗ್ಗೆ ಮಾತನಾಡಿದರೆ ಅಂತಹ ವ್ಯಕ್ತಿಗಳನ್ನು ಸಹಿಸಲ್ಲ. ಅವರಿಗೆ ನಾಚೀಕೆಯಾಗಬೇಕು. ನಮ್ಮ ದೇಶದಲ್ಲಿ ಉಳಿಯು ಇಂತವರಿಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನಾನು ಪ್ರಧಾನಿಯಾಗಿದ್ದರೆ ಗಂಟುಮೂಟೆ ಪ್ಯಾಕ್ ಮಾಡಿಸಿ ದೇಶದಿಂದ ತೊಲಗಿಸುತ್ತಿದ್ದೆ ಎಂದು ಹೇಳಿದ್ದಾರೆ.
ಶಮಾ ವಿರುದ್ಧ ತೀವ್ರ ಟೀಕೆ
ಪಕ್ಷದ ವಕ್ತಾರೆಯಾಗಿ ಇಂತಹ ಹೇಳಿಕೆ ನೀಡಲು ನಾಚಿಕೆಯಾಗಬೇಕು ಎಂದು ಬಿಜೆಪಿ ಶಮಾ ವಿರುದ್ಧ ತೀವ್ರ ಕಿಡಿಕಾರಿದೆ. ಕ್ರಿಕೆಟ್ ಅಭಿಮಾನಿಗಳು ಕಾಂಗ್ರೆಸ್ ನಾಯಕಿಯನ್ನು ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಆಕೆಯ ಟೀಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಒಂದೆಡೆ ಶಮಾ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾದರೆ, ಮತ್ತೊಂದೆಡೆ, ಆಕೆಯ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ ಸಂಸದ ಸೌಗತಾ ರೇ ಸಮರ್ಥಿಸಿಕೊಂಡಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ.(ಏಜೆನ್ಸೀಸ್)
ಭಾರತ ತಂಡಕ್ಕೆ ರೋಹಿತ್ ಶರ್ಮ ಅಗತ್ಯವಿಲ್ಲ! ಶಮಾ ಹೇಳಿಕೆಗೆ ಸಾಥ್ ಕೊಟ್ಟ ತೃಣಮೂಲ ಕಾಂಗ್ರೆಸ್ ಸಂಸದ | Rohit Sharma