17 C
Bangalore
Friday, December 13, 2019

ಚುನಾವಣೆಯಲ್ಲಿ ಗೆದ್ದರೆ ಕೆಲಸ ಮಾಡುತ್ತೇನೆ, ಸೋತರೆ ಗೆದ್ದವರಿಂದ ಕೆಲಸ ಮಾಡಿಸುತ್ತೇನೆ: ಪ್ರಕಾಶ್‌ ರಾಜ್‌

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ಬೆಂಗಳೂರು: ನಾನು ಗೆದ್ದರೆ ಕೆಲಸ ಮಾಡುತ್ತೇನೆ. ಸೋತರೆ ಗೆದ್ದವನ ಬಳಿ ಕೆಲಸ ಮಾಡಿಸುತ್ತೇನೆ. ನಾನು 5 ವರ್ಷಕ್ಕೆ ಬಂದಿಲ್ಲ. ಬದಲಾಗಿ ಮುಂದಿನ ದಿನಗಳಿಗಾಗಿ ಬಂದಿದ್ದೇನೆ ಎಂದು ಬೆಂಗಳೂರು ಕೇಂದ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ನಟ ಪ್ರಕಾಶ್‌ ರಾಜ್‌ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ‌ ಮಾತು ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿ, ಯಾರೋ ದೊಡ್ಡ ನಾಯಕರೊಬ್ಬರು ಹೇಳಿದರು. 3 ಲಕ್ಷ ಮತಗಳನ್ನು ಪಡೆದುಕೊಳ್ಳುತ್ತೇನೆ ಎಂದು. ಮೂರು ಲಕ್ಷ ಮತ ಬಂದರೆ ಪರ್ಯಾಯ ರಾಜಕಾರಣಕ್ಕೆ ಅಲ್ಲಿನ ಜನ ಬಯಸುತ್ತಿದ್ದಾರೆ ಎಂದರ್ಥ. ಜೆಡಿಎಸ್ ಮತ್ತು ಕಾಂಗ್ರೆಸ್‌ ಸೆಕ್ಯುಲರಿಸ್ಟ್ ಎಂದು ಹೇಳಿದರೆ ನಾವು ಒಪ್ಪಿಕೊಳ್ಳಬೇಕಾಗಿಲ್ಲ. ನನಗೆ ಮುಸ್ಲಿಂ – ಹಿಂದುಗಳು ಎಂಬ ಬೇಧ ಭಾವ ಇಲ್ಲ. ಮನುಷ್ಯ ಇದ್ದ ಕಡೆ ವಿಕೃತ ಮನಸ್ಸುಗಳು ಇವೆ ಎಂದರು.

ಕರ್ನಾಟಕದಲ್ಲಿ ದೋಸ್ತಿ ಸರ್ಕಾರ ಕುರಿತು ಪ್ರತಿಕ್ರಿಯಿಸಿ, ಕಾರ್ಯಕರ್ತರನ್ನು ಗೆಲ್ಲುವುದರಲ್ಲಿ ಎರಡು ಪಕ್ಷಗಳು ಸೋತಿರುವುದರಿಂದಲೇ ಅಲ್ಲಿ ನಾಟಕ ನಡೆಯುತ್ತಿದೆ. ನಾನು ಒನ್ ಮ್ಯಾನ್ ಆರ್ಮಿ ಅಲ್ಲ. ನಾನು ಯೋಚನೆ ಮಾಡಿದೆ. ಬೆಂಗಳೂರು ಸೆಂಟ್ರಲ್‌ನಲ್ಲಿ 5,500 ಜನ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಎಲ್ಲರ ಜತೆ ನಾನು ಮಾತನಾಡಿದ್ದೇನೆ. ಫಲಿತಾಂಶ ಬಂದಾಗ ಗೊತ್ತಾಗುತ್ತದೆ. ಸಂಸತ್ತಿನಲ್ಲಿ ನಾನು ಪ್ರತಿನಿಧಿಸುವ ಕ್ಷೇತ್ರದ ಜನರು ಹಾಗೂ ನಾನು ಸೇರಿಸಿ ಸಂಸದ ಆಗುತ್ತೇವೆ ನಾನೊಬ್ಬನೆ ಅಲ್ಲ ಎಂದು ಹೇಳಿದರು.

ಸೆಕ್ಯುಲರ್ ಅಂದರೆ ಎಲ್ಲರೂ. ನನಗೆ ಜಾತಿ ಲೆಕ್ಕಚಾರ ಬೇಡ. ನನಗೆ ಜನ‌ಮುಖ್ಯ. ನಾನು ಯಾವುದೇ ಪಕ್ಷದ ಪರವಾಗಿ ಇಲ್ಲ. ನಾನು ಪರ್ಯಾಯ ರಾಜಕೀಯ ಮಾಡುವುದಕ್ಕೆ ಬಂದಿದ್ದೇನೆ. ನನಗೆ ಏನು ಬೇಡ ಎಂಬುದು ನನಗೆ ಗೊತ್ತು. ಪ್ರಯಾಣ ನನ್ನನ್ನು ನಿರ್ಧರಿಸುತ್ತದೆ, ನಾನು ಪ್ರಯಾಣವನ್ನು ನಿರ್ಧರಿಸುವುದಿಲ್ಲ. ಗೌರಿ ಹೋಗುವರೆಗೂ ನನಗೆ ರಾಜಕೀಯಕ್ಕೆ ಬರಬೇಕು, ಆಕ್ಟಿವಿಸ್ಟ್ ಆಗಬೇಕು ಎಂದು ಗೊತ್ತಿರಲಿಲ್ಲ. ಮುಂದಿನ ದೇಶಕ್ಕಾಗಿ ಇರಬೇಕು ಎಂದುಕೊಂಡೆ ಎಂದರು. (ದಿಗ್ವಿಜಯ ನ್ಯೂಸ್)

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...