ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿಗೆ 160 ಸ್ಥಾನ ಗಟ್ಟಿ: ಶಾಸಕ ಶ್ರೀರಾಮುಲು ವಿಶ್ವಾಸ

ಚಿತ್ರದುರ್ಗ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿ 160 ಸ್ಥಾನ ಗೆಲ್ಲುತ್ತದೆ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಜಿಪಂ ತ್ರೈಮಾಸಿಕ ಕೆಡಿಪಿ ಸಭೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಭಯದಿಂದ ಜೆಡಿಎಸ್-ಕಾಂಗ್ರೆಸ್ ಪಕ್ಷಗಳಿಂದ ತೇಪೆ ಹಚ್ಚುವ ಕೆಲಸ ನಡೆಯುತ್ತಿದೆ.

ನಾನು ಚಿವುಟಿದಂತೆ ಮಾಡುತ್ತೇನೆ, ನೀನು ಅತ್ತಂತೆ ಮಾಡು ಎಂ ವರ್ತನೆ ಜೆಡಿಎಸ್ ಕಾಂಗ್ರೆಸ್ಸಿಗರದ್ದಾಗಿದೆ. ಮಧ್ಯಂತರ ಚುನಾವಣೆ ಬಂದರೆ ಕಾಂಗ್ರೆಸ್ ಇರುವ ಸ್ಥಾನಗಳನ್ನೂ ಕಳೆದುಕೊಳ್ಳಲಿದೆ. ಹೀಗಾಗಿ ಕಾಂಗ್ರೆಸ್ಸಿಗರು ಮಧ್ಯಂತರ ಚುನಾವಣೆಗೆ ಸಿದ್ದರಾಗಿಲ್ಲ.

ಬಳ್ಳಾರಿಗೂ ರಾಮುಲುಗೂ ಏನು ಸಂಬಂಧ ಎಂಬ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ರಾಹುಲ್ ಗಾಂಧಿ ಸ್ವಕ್ಷೇತ್ರ ಬಿಟ್ಟು ಬೇರೆ ಕಡೆ ಯಾಕೆ ಸ್ಪರ್ಧೆ ಮಾಡಿದ್ರು?ಅದಕ್ಕಾಗಿ ಅವರ ಸ್ವಕ್ಷೇತ್ರದ ಸಂಬಂಧ ಮುಗೀತಾ ? ದೇವೇಗೌಡರು, ಸಿದ್ದರಾಮಯ್ಯ ಯಾಕೆ ಬೇರೆ ಕ್ಷೇತ್ರಗಳನ್ನು ಅರಸಿ ಹೋದ್ರು?

ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿದೆ. ಈ ನಡುವೆ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದಾರೆ. ಶ್ರೀರಾಮುಲು ಹುಡುಕಿಕೊಡಿ ಎಂದು ಪ್ರತಿಭಟನೆಗೆ ಸಜ್ಜಾದ ರೈತರ ನಿಲುವಿಗೆ ರಾಮುಲು ಪ್ರತಿಕ್ರಿಯಿಸಿದ ಅವರು, ಚುನಾವಣೆ ಕಾರಣದಿಂದಾಗಿ ನಾನು ರಾಜ್ಯಾದ್ಯಂತ ಪ್ರವಾಸದಲ್ಲಿದ್ದೆ. ಹೀಗಾಗಿ ಮೊಳಕಾಲ್ಮೂರು ಕ್ಷೇತ್ರಕ್ಕೆ ಭೇಟಿ ಕೊಡಲು ಆಗಿರಲಿಲ್ಲ. ನನ್ನಿಂದ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *