16 C
Bangalore
Thursday, December 12, 2019

ಎಸ್​ಐಟಿ ವಶಕ್ಕೆ ರೋಷನ್​ ಬೇಗ್​: ಮುಖ್ಯಮಂತ್ರಿ ವಿರುದ್ಧ ಸರಣಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕಾಂಗ್ರೆಸ್​ ಮುಖಂಡ ರೋಷನ್​ ಬೇಗ್​ನನ್ನು ಎಸ್​ಐಟಿ ವಶಕ್ಕೆ ತೆಗೆದುಕೊಂಡಿದ್ದು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯ ಘಟಕ ಸರಣಿ ಟ್ವೀಟ್​ ಮಾಡಿ ಇದೇ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದೆ.

ನಿನ್ನೆ ರೋಷನ್​ಬೇಗ್​ ಅವರನ್ನು ಎಸ್​ಐಟಿ ವಶಕ್ಕೆ ಪಡೆಯುತ್ತಿದ್ದಂತೆ ಎಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದರು. ‘ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲು ಎಸ್​ಐಟಿ ಅಧಿಕಾರಿಗಳು ರೋಷನ್​ ಬೇಗ್​ ಅವರನ್ನು ವಶಕ್ಕೆ ಪಡೆದಿದ್ದಾರೆ. ರೋಷನ್​ ಬೇಗ್​ ಅವರು ಬಿಜೆಪಿಯ ಬಿ.ಎಸ್.ಯಡಿಯೂರಪ್ಪನವರ ಪಿಎ ಸಂತೋಷ್​ ಜತೆ ಮುಂಬೈಗೆ ಹಾರಲು ಯತ್ನಿಸುತ್ತಿದ್ದ ವೇಳೆ ಬಿಐಎಎಲ್​ ಏರ್​ಪೋರ್ಟ್​ನಲ್ಲಿ ಅವರನ್ನು ಎಸ್​ಐಟಿ ವಶಕ್ಕೆ ಪಡೆದಿದೆ. ಎಸ್​ಐಟಿ ಅಧಿಕಾರಿಗಳನ್ನು ನೋಡುತ್ತಿದ್ದಂತೆ ಸಂತೋಷ್​ ಓಡಿ ಹೋಗಿದ್ದಾರೆ ಎಂದು ನನಗೆ ಅಲ್ಲಿದ್ದವರು ಹೇಳಿದ್ದಾರೆ ಎಂದು ಪೋಸ್ಟ್​ ಮಾಡಿಕೊಂಡಿದ್ದರು.

ಅದಕ್ಕೆ ಪ್ರತಿಯಾಗಿ ಬಿಜೆಪಿ ಇಂದು ಟ್ವೀಟ್​ ಮೂಲಕ ತಿರುಗೇಟು ನೀಡಿದೆ. ರೋಷನ್​ ಬೇಗ್​ ನಿಜಕ್ಕೂ ಆರೋಪಿಯಾಗಿದ್ದರೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅವರನ್ನು ಜುಲೈ 12ರಂದು ರಾತ್ರಿ ತಾಜ್​ ವೆಸ್ಟ್​ಎಂಡ್ ಹೋಟೆಲ್​ನಲ್ಲಿ ಗುಟ್ಟಾಗಿ ಏಕೆ ಭೇಟಿ ಮಾಡಬೇಕಿತ್ತು. ರೋಷನ್​ ಬೇಗ್​ ಅವರನ್ನು ಗುಪ್ತವಾಗಿ ಭೇಟಿಯಾದ ಬಗ್ಗೆ ಮುಖ್ಯಮಂತ್ರಿ ಬಹಿರಂಗವಾಗಿ ವಿವರಣೆ ನೀಡಬೇಕಲ್ಲವೇ ಎಂದು ಪ್ರಶ್ನಿಸಿದೆ.

ಕುಮಾರಸ್ವಾಮಿ ಸರ್ಕಾರಕ್ಕೆ ರೋಷನ್​ ಬೇಗ್​ ಬೆಂಬಲ ಕೊಡುತ್ತಿದ್ದಾಗ ಎಲ್ಲವೂ ಚೆನ್ನಾಗಿಯೇ ಇತ್ತು. ಯಾವಾಗ ಅವರು ತಮ್ಮ ಬೆಂಬಲ ಹಿಂಪಡೆದುಕೊಂಡರೋ ಅಂದಿನಿಂದ ಅವರಿಗೆ ಕುಮಾರಸ್ವಾಮಿ ಸರ್ಕಾರಿ ಅಧಿಕಾರಿಗಳನ್ನು, ಸಂಸ್ಥೆಗಳನ್ನು ಬಳಸಿಕೊಂಡು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ ಎಂದು ಟ್ವೀಟ್​ ಮೂಲಕ ಆರೋಪಿಸಿದೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...