More

    ನೇಮ, ಕೋಲ ನಿಲ್ಲಿಸಿದರೆ, ಪ್ರಾರ್ಥನೆ ಪರಿಹಾರ; ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಲಹೆ

    ಬೆಳ್ತಂಗಡಿ: ಕೋವಿಡ್ ಹಿನ್ನಲೆಯಲ್ಲಿ ಈ ವರ್ಷ ಹತ್ತನಾವಧಿಯ ಒಳಗೆ ನಡೆಯಬೇಕಾದ ನೇಮ, ಕೋಲಾದಿಗಳನ್ನು ನಿಲ್ಲಿಸಿ ಆಯಾಯ ಅಥವಾ ಸಾನ್ನಿಧ್ಯದಲ್ಲಿ ಕ್ಷಮೆ ಯಾಚಿಸಿ, ಪ್ರಾರ್ಥಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಲಹೆ ನೀಡಿದ್ದಾರೆ.

    ಏಪ್ರಿಲ್ ಮತ್ತು ಮೇ ತಿಂಗಳು ಧಾರ್ಮಿಕ ಚಟುವಟಿಕೆಗಳಿಗೆ ಪ್ರಮುಖ ಮಾಸ. ಪ್ರಾಕೃತಿಕವಾಗಿಯೂ ಮೇ ತಿಂಗಳ ಬಳಿಕ ನಾಲ್ಕೈದು ತಿಂಗಳು ಮಳೆಗಾಲ. ಕೃಷಿ ಹೊರತಾದ ಚಟುವಟಿಕೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಹತ್ತನಾವಧಿ ಅಂದರೆ ವರ್ಷದಲ್ಲಿ ದೇವಸ್ಥಾನ, ದೈವಸ್ಥಾನ, ಭೂತಸ್ಥಾನ ಮತ್ತು ಕೌಟುಂಬಿಕ ಸಾನ್ನಿಧ್ಯಗಳ ನಾಗಾರಾಧನೆ ಇತ್ಯಾದಿ ನಡೆಯುತ್ತದೆ. ಆ ಬಳಿಕ ದೀಪಾವಳಿವರೆಗೂ ಎಲ್ಲ ಧಾರ್ಮಿಕ ಚಟುವಟಿಕೆಗಳಿಗೆ ವಿಶ್ರಾಂತಿ. ಧರ್ಮಸ್ಥಳದಲ್ಲಿಯೂ ದೇವಸ್ಥಾನದಲ್ಲಿ ಹತ್ತನಾವಧಿ ಬಳಿಕ ಧಾರ್ಮಿಕ ಆರಾಧನೆಗಳಿಲ್ಲ.

    ಜನರು ಸದ್ಯ ಕರೊನಾ ವ್ಯಾಧಿಯಿಂದಾಗಿ ಒಟ್ಟಾಗಿ ಧಾರ್ಮಿಕ ಕಾರ್ಯಕ್ರಮಗಳು ಸಾಧ್ಯವಾಗುತ್ತಿಲ್ಲ. ಈ ಜಿಜ್ಞಾಸೆಗೆ ಪರಿಹಾರವೆಂದರೆ ಕಾಲೋಚಿತ ಮತ್ತು ಸಮಯೋಚಿತವಾಗಿ ಈ ಎಲ್ಲ ಕ್ರಿಯೆಗಳನ್ನು ಹಿಂದಿನಂತೆ ವಿಜೃಂಭಣೆ ಬದಲು ತಾತ್ವಿಕವಾಗಿ ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿಕೊಂಡು ಕ್ಷಮೆ ಕೇಳಬಹುದು. ದೈವದ ಪರ್ವಗಳನ್ನು ಹಗಲು ಹೊತ್ತಿನಲ್ಲಿ ಮಾಡಬಹುದು ಎಂದು ಹೆಗ್ಗೆಡೆ ಅವರು ವಿವರಿಸಿದ್ದಾರೆ.

    ಕಳೆದ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಯಿ ನಡಾವಳಿ ಮತ್ತು ವಿಷು ಜಾತ್ರೆಗಳು, ಕೋಲ, ನೇಮಗಳು ನಡೆಸಲು ಸಾಧ್ಯವಾಗಿಲ್ಲ. ಈ ವಿಚಾರ ಪ್ರಶ್ನೆಚಿಂತನೆ ಮಾಡಿದಾಗ ಈ ವರ್ಷದ ಎಲ್ಲ ಆರಾಧನೆಯ ಚಟುವಟಿಕೆಗಳನ್ನು ಸಾಂಕೇತಿಕವಾಗಿ ಮಾಡಿ ಎಂದು ದೈವವಾಣಿಯಾಗಿತ್ತು. ರಥೋತ್ಸವ ಹಾಗೂ ಗಗ್ಗರ ಕಟ್ಟಿ ಮಾಡುವ ಕೋಲಗಳು ನಡೆಸಬೇಕಿಲ್ಲ ಎಂಬುದು ಉಲ್ಲೇಖ.ಅನೇಕ ಕ್ಷೇತ್ರಗಳಲ್ಲಿಯೂ ಈ ರೀತಿಯ ಸಾಂಕೇತಿಕ ಸೇವೆಗಳು ನಡೆದಿದೆ. ಹಾಗಾಗಿ ಜನರು ಹತ್ತನಾವಧಿ ಒಳಗೆ ನಡೆಯಬೇಕಾಗಿರುವ ಚಟುವಟಿಕೆಗಳಾದ ನೇಮ, ಕೋಲಾದಿಗಳನ್ನು ನಿಲ್ಲಿಸಿ ಆಯಾಯ ಅಥವಾ ಸಾನ್ನಿಧ್ಯದಲ್ಲಿ ಕ್ಷಮೆ ಯಾಚಿಸಿ, ಪ್ರಾರ್ಥಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts