

Modi warns Pakistan: ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡಿದ್ರೆ ಅದರ ಪ್ರತಿಕಾರ ಬಲವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ಭಾನುವಾರ ವರದಿ ಮಾಡಿದೆ.
ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ಶಮನದ ಬಗ್ಗೆ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ಗೆ ದೂರವಾಣಿ ಕರೆ ಮಾಡಿ ಮಾತನಾಡುವ ಸಂದರ್ಭದಲ್ಲಿ '' ಪಾಕಿಸ್ತಾನ ದಾಳಿ ಮಾಡಿದ್ರೆ ಭಾರತ ಇನಷ್ಟು ಬಲವಾಗಿ ದಾಳಿ ಮಾಡುತ್ತದೆ'' ಎಂದು ಪ್ರಧಾನಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗಿನ ವ್ಯಾನ್ಸ್ ಭೇಟಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರೊಂದಿಗೆ ಮತ್ತು ನಂತರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಚರ್ಚೆ ನಡೆಸಲಾಯಿತು. ಈ ವೇಳೆ ಪಾಕಿಸ್ತಾನ ಗುಂಡು ಹಾರಿಸದಿದ್ದರೆ, ಭಾರತವೂ ಸಂಯಮದಿಂದ ವರ್ತಿಸುತ್ತದೆ ಎಂದು ನವದೆಹಲಿ ಚರ್ಚೆಯ ಸಮಯದಲ್ಲಿ ತಿಳಿಸಿತು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
"ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕಾದರೆ, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ), ಅಕ್ರಮ ಪ್ರದೇಶಗಳನ್ನು ಹಿಂದಿರುಗಿಸುವುದು ಮತ್ತು ಭಯೋತ್ಪಾದಕರ ಹಸ್ತಾಂತರದ ಬಗ್ಗೆ ಮಾತ್ರ ಚರ್ಚಿಸುವುದು ಭಾರತದ ಸಂದೇಶವಾಗಿತ್ತು" ಎಂದು ವರದಿ ಉಲ್ಲೇಖಿಸಿದೆ.(ಏಜೆನ್ಸೀಸ್)