ಸುಮಲತಾ ಗೆದ್ದರೆ ಅರ್ಧ ಶತಮಾನದ ದಾಖಲೆ

Latest News

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​...

ಮೇ 30ರ ವರೆಗೂ ಹರಿಯಲಿ ನೀರು: ಕರ್ನಾಟಕ ರೈತ ಹಿತರಕ್ಷಣಾ ವೇದಿಕೆ ಒತ್ತಾಯ

ಗಂಗಾವತಿ: ಎರಡನೇ ಬೆಳೆಗಾಗಿ ತುಂಗಭದ್ರಾ ಎಡದಂಡೆ ಕಾಲುವೆಗೆ ಮೇ 30ರವರೆಗೂ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ...

ಕಾಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ

ಕಾರಟಗಿ: ತುಂಗಭದ್ರಾ ಜಲಾಶಯದಲ್ಲಿ 96 ಟಿಎಂಸಿ ಅಡಿ ನೀರಿದ್ದರೂ ಎರಡನೇ ಬೆಳೆಗೆ ನೀರು ಬಿಡಲು ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ನಾಚಿಕೆಗಢು. ಏ.20ರ...

ಐತಿಹಾಸಿಕ ಪಿಂಕ್​ಬಾಲ್, ಅಹರ್ನಿಶಿ ಟೆಸ್ಟ್​ನಲ್ಲಿ 106 ಕ್ಕೆ ಆಲ್​ ಔಟ್​ ಆದ ಬಾಂಗ್ಲಾ ಹುಲಿಗಳು: ಪ್ರಭುತ್ವ ಮೆರೆದ ಭಾರತದ ವೇಗಿಗಳು

ಕೋಲ್ಕತ: ಬಾಂಗ್ಲಾದೇಶದ ವಿರುದ್ಧ ಈಡನ್ ಗಾರ್ಡನ್​ನಲ್ಲಿ ನಡೆಯುತ್ತಿರುವ ಮೊದಲ ಅಹರ್ನಿಶಿ ಟೆಸ್ಟ್​ ಕ್ರಿಕೆಟ್​​ ಪಂದ್ಯದ ಮೊದಲದಿನ ಭಾರತ ಕ್ರಿಕೆಟ್​ ತಂಡ ಪ್ರಭುತ್ವ ಮೆರೆದಿದೆ....

| ರಮೇಶ ದೊಡ್ಡಪುರ ಬೆಂಗಳೂರು

ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರ ಈ ಬಾರಿ ಅರ್ಧ ಶತಮಾನದಲ್ಲೇ ಆಗದ ದಾಖಲೆ ಬರೆಯುವ ಸಾಧ್ಯತೆ ಇದೆ. ಕಾಂಗ್ರೆಸ್​ನಿಂದ ಟಿಕೆಟ್ ಅರಸಿ, ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಹೋದಾಗ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಷ್ ಜಯಿಸಿದರೆ 52 ವರ್ಷಗಳಲ್ಲಿ ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಜಯಿಸಿದ ಮೊದಲ ಸ್ವತಂತ್ರ ಅಭ್ಯರ್ಥಿ ಎಂಬ ದಾಖಲೆ ಬರೆಯಲಿದ್ದಾರೆ.

1967ರಲ್ಲಿ ಕೊನೇ ಸಂಸದ: ಸ್ವತಂತ್ರ ಭಾರತದಲ್ಲಿ ವಿವಿಧ ರಾಜ್ಯಗಳಲ್ಲಿ ನೋಂದಾಯಿತ ಪಕ್ಷಗಳ ಜತೆಗೆ ಸ್ವತಂತ್ರ ಅಭ್ಯರ್ಥಿಗಳು ಕಣಕ್ಕಿಳಿದು ಜಯಿಸಿರುವ ಉದಾರಣೆಗಳಿವೆ. ಕರ್ನಾಟಕದ ಮಟ್ಟಿಗೆ ಸ್ವತಂತ್ರ ಅಭ್ಯರ್ಥಿಗಳು ಎಂದರೆ ಅಷ್ಟಕ್ಕಷ್ಟೆ. ಭಾರತದ ಸಂವಿಧಾನ ರಚನೆ ನಂತರ ನಡೆದ ಎರಡನೇ ಸಾರ್ವತ್ರಿಕ ಚುನಾವಣೆಯಲ್ಲಿ (1957) ಮೈಸೂರು ರಾಜ್ಯದ ಮೊದಲ ಸ್ವತಂತ್ರ ಅಭ್ಯರ್ಥಿಯಾಗಿ ಬಿಜಾಪುರ ಉತ್ತರದಿಂದ ಸುಗಂಧಿ ಮುರುಗೆಪ್ಪ ಸಿದ್ದಪ್ಪ ಜಯಿಸಿದ್ದರು. ನಂತರ 1967ರ ಸಾರ್ವತ್ರಿಕ ಚುನಾವಣೆಯಲ್ಲಿ ಕೆನರಾ ಕ್ಷೇತ್ರದಿಂದ ಡಿ.ಡಿ.ದತ್ತಾತ್ರೇಯ ಸಂಸದರಾಗಿದ್ದರು. ಅಲ್ಲಿಂದೀಚೆಗೆ ರಾಜ್ಯದಲ್ಲಿ ಯಾವುದೇ ಸ್ವತಂತ್ರ ಅಭ್ಯರ್ಥಿ ಗೆದ್ದಿಲ್ಲ. ಸುಮಲತಾ ಸ್ವತಂತ್ರ ಅಭ್ಯರ್ಥಿ ಎಂಬುದು ಹೆಸರಿಗಾದರೂ, ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಪರೋಕ್ಷವಾಗಿ ಬೆನ್ನಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನೇ ಕಣಕ್ಕಿಳಿಸದೆ ಬಹಿರಂಗವಾಗಿಯೇ ಸುಮಲತಾ ಪರ ಪ್ರಚಾರ ಹಾಗೂ ಚುನಾವಣಾ ನಿರ್ವಹಣೆಯಲ್ಲಿ ತೊಡಗುವ ಸಾಧ್ಯತೆಯಿದೆ. ಇನ್ನು ಅಂಬಿ ಮೇಲಿನ ಗೌರವದಿಂದಾಗಿ ಇಡೀ ಕನ್ನಡ ಚಿತ್ರರಂಗ ಹಿಂದೆ ನಿಲ್ಲುವ ಸೂಚನೆ ನೀಡಿದೆ. ಇದೆಲ್ಲದರ ನಡುವೆ ಮಂಡ್ಯದಲ್ಲಿ ಪ್ರಬಲವಾಗಿರುವ ಜೆಡಿಎಸ್ ಜತೆ ಪೈಪೋಟಿ ನಡೆಯುವುದಂತೂ ಖಚಿತ. ‘ದೇವೇಗೌಡರ ಕುಟುಂಬ’ದ ಎದುರು ‘ಅಂಬಿ ಕುಟುಂಬ’ ಜಯಿಸಿದ್ದೆ ಆದರೆ, ಮೈಸೂರು ರಾಜ್ಯ ಎಂದಿದ್ದ ಹೆಸರು ಕರ್ನಾಟಕ ಎಂದು ನಾಮಕರಣವಾದ ನಂತರ ರಾಜ್ಯದಲ್ಲಿ ಜಯಿಸಿದ ಮೊದಲ ಸ್ವತಂತ್ರ ಅಭ್ಯರ್ಥಿ ಎಂಬ ಹೆಗ್ಗಳಿಗೆ ಸುಮಲತಾ ಹೆಗಲೇರಲಿದೆ.

2014ರಲ್ಲಿ 194 ಅಭ್ಯರ್ಥಿಗಳು

2014ರಲ್ಲಿ ದೇಶಾದ್ಯಂತ ಸ್ಪರ್ಧಿಸಿದ್ದ 3,234 ಸ್ವತಂತ್ರ ಅಭ್ಯರ್ಥಿಗಳ ಪೈಕಿ 3,218 ಮಂದಿ ಠೇವಣಿ ಕಳೆದುಕೊಂಡರೆ, ಜಯಿಸಿದ್ದು ಕೇವಲ ಮೂವರು. ಒಟ್ಟಾರೆ ದೇಶದಲ್ಲಿ ಚಲಾವಣೆಯಾದ ಮತಗಳ ಪೈಕಿ ಸ್ವತಂತ್ರ ಅಭ್ಯರ್ಥಿಗಳು ಪಡೆದಿದ್ದು ಕೇವಲ ಶೇ.0.45. ರಾಜ್ಯದಲ್ಲಿ 2014ರಲ್ಲಿ 194 ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿ 4.83 ಲಕ್ಷ (ಶೇ.1.57) ಮತ ಗಳಿಸಿದ್ದರು. ಯಾರೊಬ್ಬರೂ ಗೆಲ್ಲಲಿಲ್ಲ.

- Advertisement -

Stay connected

278,668FansLike
576FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...