More

    ರೈತರ ಬದುಕು ಹಸನಾದರೆ ದೇಶ ಅಭಿವೃದ್ಧಿ

    ಆಯನೂರು: ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ರೈತರ ಅಭಿವೃದ್ಧಿ, ನೆಮ್ಮದಿಯ ಜೀವನ ಕಾಣಲು, ಬದುಕು ಹಸನಾಗಲು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

    ಕುಂಸಿ ಗ್ರಾಮದಲ್ಲಿ ಬುಧವಾರ ಬಿಜೆಪಿ ರೈತ ಮೋರ್ಚಾ ಹಮ್ಮಿಕೊಂಡಿದ್ದ ಪ್ರಗತಿಪರ ರೈತರ ಮತ್ತು ರೈತ ಉತ್ಪಾದಕ ಸಂಸ್ಥೆ ಎಫ್‌ಪಿಒ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
    ಮೇ 7ರಂದು ನಡೆಯುವ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ನಿಶ್ಚಿತ. ಅವರು ಜಿಲ್ಲೆಯ ಅಬಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಈ ಮೊದಲು ಅಭಿವೃದ್ಧಿ ಎಂದರೆ ಬಿ.ಎಸ್.ಯಡಿಯೂರಪ್ಪ ಎಂಬ ಮಾತು ಇತ್ತು. ಈಗ ರಾಘವೇಂದ್ರ ಎಂಬಂತಾಗಿದೆ. ಹಾಗೆಯೇ ಮೋದಿ ಅವರು ಇನ್ನೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ ಎಂದರು.
    ಜಿಲ್ಲೆಯಲ್ಲಿ ಜೆಡಿಎಸ್ ಶಾಸಕಿ ಶಾರದಾ ಪೂರ‌್ಯಾನಾಯ್ಕ ಹಾಗೂ ಬಿಜೆಪಿ ಪಕ್ಷದಿಂದ ರಾಘವೇಂದ್ರ ಅವರಿಗೆ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ರೈತರ ಆದಾಯ ದ್ವಿಗುಣ ಆಗಬೇಕು ಎಂದು ಮೋದಿ ಅವರು ಹಲವಾರು ಯೋಜನೆ ಹಮ್ಮಿಕೊಂಡಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅವುಗಳಿಗೆ ಕಲ್ಲು ಹಾಕುವ ಕೆಲಸ ಮಾಡಿದೆ. ದೇಶ ಅಭಿವೃದ್ಧಿ ಆಗಬೇಕಾದರೆ ಮೊದಲು ಅನ್ನ ನೀಡುವ ರೈತನ ಬದುಕು ಹಸನಾಗಬೇಕು ಎಂಬುದು ಪ್ರಧಾನಿ ಚಿಂತನೆ. ಕಾಂಗ್ರೆಸ್ ಆಡಳಿತದಿಂದ ರಾಜ್ಯದಲ್ಲಿ ಎಂತಹ ಪರಿಣಾಮ ಉಂಟಾಗಿದೆ ಎಂಬುದು ಜನತೆಗೆ ಗೊತ್ತಾಗಿದೆ. ಕಾಂಗ್ರೆಸ್ ಪಕ್ಷ ಮೊಸಳೆ ಕಣ್ಣಿರು ಸುರಿಸುತ್ತಿದೆ ಎಂದು ಟೀಕಿಸಿದರು.
    ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭ ರೈತರು ವಿದ್ಯುತ್ ಸಂಪರ್ಕ ಪಡೆಯಲು ಕೇವಲ 25 ಸಾವಿರ ರೂ. ಶುಲ್ಕ ವಿಧಿಸಲಾಗುತ್ತಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಈ ಮೊತ್ತ 1.50 ಲಕ್ಷ ರೂ.ಗೆ ಏರಿಕೆಯಾಗಿದೆ. ಇದು ರಾಜ್ಯ ಸರ್ಕಾರಕ್ಕೆ ರೈತರ ಪರ ಇರುವ ಕಾಳಜಿ ಎಂಥದ್ದು ಎಂಬುದನ್ನು ಸಾಬೀತುಪಡಿಸಿದೆ. ಕೇಂದ್ರ ಸರ್ಕಾರವನ್ನು ಟೀಕಿಸುವ ರಾಜ್ಯ ಸರ್ಕಾರ ರೈತರಿಗೆ ಬರ, ನೆರೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದರು.
    ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರಾಷ್ಟ್ರೀಯ ಉಪಾಧ್ಯಕ್ಷ ಜಯಸೂರ್ಯ, ಪ್ರಧಾನ ಕಾರ್ಯದರ್ಶಿ ಶಂಭುಕುಮಾರ, ಜಿಲ್ಲಾ ಪ್ರಭಾರಿ ನವೀನ್, ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ, ಮಂಡಲ ಅಧ್ಯಕ್ಷ ಮಹೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts