More

    ನಿಗದಿತ ಗುರಿ ಸಾಧಿಸದಿದ್ದರೆ ಕ್ರಮ

    ಬೆಳಗಾವಿ: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಂಚಿಕೆಯಾದ ಅನುದಾನ ಖರ್ಚು ಮಾಡುವುದು ಕಡ್ಡಾಯವಾಗಿದೆ. ಸರ್ಕಾರ ಕೂಡ ಇದನ್ನು ಗಂಭೀರವಾಗಿ ಪರಿಗಣಿಸುವುದರಿಂದ ಎಲ್ಲ ಇಲಾಖೆಗಳು ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಎಸ್‌ಸಿಪಿ /ಟಿಎಸ್‌ಪಿ ಅನುದಾನದಡಿ 2020ರ ನವೆಂಬರ್ ಅಂತ್ಯದವರೆಗೆ ಕೈಗೊಂಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ನಿಗದಿತ ಪ್ರಗತಿ ಸಾಧಿಸದಿದ್ದರೆ ಇಲಾಖೆಯ ಅಧಿಕಾರಿಗಳ ವಿರುದ್ಧ ನಿಯಮಾವಳಿ ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

    ಎಸ್‌ಸಿಪಿ ಶೇ. 70.69 ಸಾಧನೆ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ ಯೋಜನೆಯಡಿ ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ನವೆಂಬರ್ ಅಂತ್ಯದವರೆಗೆ ಶೇ.70.69 ಖರ್ಚಾಗಿದೆೆ. ಅದೇ ರೀತಿ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ)ಯಡಿ ನವೆಂಬರ್ ಅಂತ್ಯದವರೆಗೆ ಶೇ.62 ಪ್ರಗತಿಯಾಗಿದೆ. ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಅನುಮೋದಿತ ಕ್ರಿಯಾಯೋಜನೆ ಪ್ರಕಾರ ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಮಹಾನಗರ ಪಾಲಿಕೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳು ಕೂಡ ನೂರಕ್ಕೆ ನೂರರಷ್ಟು ಅನುದಾನ ಬಳಕೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.

    ಸಭೆಗೆ ಗೈರಾದವರಿಗೆ ನೋಟಿಸ್: ಅನುಮತಿ ಪಡೆಯದೆ ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಅವರು ಸೂಚಿಸಿದರು. ಮಹಾನಗರ ಪಾಲಿಕೆ ಸೇರಿ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಅನುದಾನವನ ್ನ ಇನ್ನೆರಡು ತಿಂಗಳಲ್ಲಿ ಖರ್ಚು ಮಾಡಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಪ್ರಗತಿ, ಅನುದಾನ ಬಳಕೆ ಬಗ್ಗೆ ನಿರ್ಲಕ್ಷೃ ತೋರುವ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ. ದರ್ಶನ್, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್ ಹೊನಕೇರಿ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಸಭೆಯನ್ನು ನಿರ್ವಹಿಸಿದರು. ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts